ವಿಧಾನ ಸೌಧ ಕಾರಿಡಾರ್ ನಲ್ಲಿ ನಾಸಿರ್ ಹುಸೇನ್ ಅಭಿಮಾನಿಗಳಿಂದ ಸಂಭ್ರಮಾಚರಣೆ  
ರಾಜಕೀಯ

ನಾಸೀರ್ ಹುಸೇನ್ ಅಭಿಮಾನಿಗಳಿಂದ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ: ಉಭಯ ಸದನಗಳಲ್ಲಿ ಪ್ರಸ್ತಾಪಕ್ಕೆ ಬಿಜೆಪಿ ಮುಂದು

ರಾಜ್ಯಸಭೆಗೆ ಆಯ್ಕೆಯಾದ ಸೈಯದ್ ನಾಸೀರ್ ಹುಸೇನ್ ಅವರ ಅನುಯಾಯಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹೇಳಲಾಗುತ್ತಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್ ನಾಯಕರು ಭರ್ಜರಿ ಸಂಭ್ರಮಾಚರಣೆ ನಡೆಸಿದ್ದು, ನಿನ್ನೆ ಮಂಗಳವಾರ ಸಂಜೆ ವಿಧಾನಸೌಧದ ಕಾರಿಡಾರ್‌ನಲ್ಲಿ ನೂತನವಾಗಿ ಆಯ್ಕೆಯಾದ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರ ಅನುಯಾಯಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ ಎಂದು ಹೇಳಲಾಗುತ್ತಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ.

ಎಫ್ ಐಆರ್ ದಾಖಲು: ಆದರೆ ಸಂಭ್ರಮಾಚರಣೆ, ಗದ್ದಲ, ಗಲಾಟೆ ಮಧ್ಯೆ ಕೂಗಿದ ಘೋಷಣೆಗಳು "ನಾಸಿರ್ ಸಾಬ್ ಜಿಂದಾಬಾದ್" ಅಥವಾ "ಪಾಕಿಸ್ತಾನ್ ಜಿಂದಾಬಾದ್" ಎಂದು ಹೇಳಿದ್ದೇ ಎಂಬುದು ಸ್ಪಷ್ಟವಾಗಿಲ್ಲ. ನಾಸಿರ್ ಹುಸೇನ್ ಮತ್ತು ಅವರ ಬೆಂಬಲಿಗರ ವಿರುದ್ಧ ಬಿಜೆಪಿ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಜಯಗಳಿಸಿದ ಕೂಡಲೇ ವಿಧಾನಸೌಧದ ಕಾರಿಡಾರ್‌ನಲ್ಲಿ ಘೋಷಣೆಗಳನ್ನು ಕೂಗುತ್ತಿದ್ದ ತಮ್ಮ ಅನುಯಾಯಿಗಳೊಂದಿಗೆ ನಾಸಿರ್ ಹುಸೇನ್ ಕಾಣಿಸಿಕೊಂಡರು.

ಉಭಯ ಸದನಗಳಲ್ಲಿ ‘ಪಾಕ್ ಘೋಷಣೆ’ ವಿಷಯ ಪ್ರಸ್ತಾಪಿಸಲಿರುವ ಬಿಜೆಪಿ: ಕಾಂಗ್ರೆಸ್ ನಾಯಕ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾರೆ, ದೇಶದ್ರೋಹವೆಸಗುವ ಕೆಲಸ ಮಾಡಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಅಲ್ಲದೆ ಘೋಷಣೆ ಕೂಗಿದವರನ್ನು ಬಂಧಿಸುವಂತೆ ಒತ್ತಾಯಿಸಿದೆ.

ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಲು ಪ್ರಯತ್ನಿಸಿರುವ ಬಿಜೆಪಿಯು ಇಂದು ವಿಧಾನಸಭೆ ಮತ್ತು ವಿಧಾನ ಪರಿಷತ್ತು ಎರಡೂ ಸದನಗಳಲ್ಲಿ ಪ್ರಸ್ತಾಪಿಸಲು ಮುಂದಾಗಿದೆ.

ವಿಧಾನಸೌಧ ಕಾರಿಡಾರ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ಎಂಎಲ್‌ಸಿ ಎನ್‌ ರವಿಕುಮಾರ್‌ ಒತ್ತಾಯಿಸಿದ್ದಾರೆ.

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ನಿನ್ನೆ ಸಾಯಂಕಾಲ ವಿಧಾನಸೌಧ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ರಾಷ್ಟ್ರ ವಿರೋಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಒತ್ತಾಯಿಸಿದ್ದಾರೆ. "ಸಾಕ್ಷಾಧಾರಗಳ ಹೊರತಾಗಿಯೂ, ಕಾಂಗ್ರೆಸ್ ಸರ್ಕಾರವು ದೇಶವಿರೋಧಿಗಳನ್ನು ರಕ್ಷಿಸಲು ಪ್ರಯತ್ನಿಸಿದರೆ, ಅದರ ಪರಿಣಾಮಗಳಿಗೆ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದರು.

ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಜಯವನ್ನು ಆಚರಿಸಲು ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧ ಕಾರಿಡಾರ್ ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳನ್ನು ಕೂಗಿದ್ದಾರೆ.

ಇದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ತುಷ್ಟೀಕರಣದ ಅಪಾಯಕಾರಿ ರಾಜಕೀಯದ ನೇರ ಪರಿಣಾಮವಾಗಿದೆ, ಇದು ದೇಶ ವಿರೋಧಿ ಶಕ್ತಿಗಳು ಮತ್ತು ಟುಕ್ಡೆ ಟುಕ್ಡೆ ಗ್ಯಾಂಗ್‌ಗೆ ಧೈರ್ಯ ತುಂಬಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT