ವಿಜಯೇಂದ್ರ
ವಿಜಯೇಂದ್ರ 
ರಾಜಕೀಯ

ಕಲಬುರಗಿ ಜಿಲ್ಲಾ ಗಡಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ತಡೆ: ಸರ್ಕಾರದ ನಡೆ ವಿರುದ್ಧ ಬಿಜೆಪಿ ವಾಗ್ದಾಳಿ

Manjula VN

ಬೆಂಗಳೂರು: ಚಿತ್ತಾಪುರದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಮಲಾಪುರದ ಕಿಣ್ಣಿ ಸಡಕ್ ಬಳಿ ಬುಧವಾರ ಮಧ್ಯರಾತ್ರಿ ಪೊಲೀಸರು ತಡೆಯೊಡ್ಡಿ ವಾಪಸ್ ಕಳುಹಿಸಿದ್ದು, ಈ ಬೆಳವಣಿಗೆಗೆ ಬಿಜೆಪಿ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಸರ್ಕಾರದ ನಡೆ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ನಮೋ ಬ್ರಿಗೇಡ್ ಮೂಲಕ ರಾಷ್ಟ್ರೀಯ ವಿಚಾರಗಳನ್ನು ಪಸರಿಸುತ್ತಿರುವ ಚಿಂತಕ ಹಾಗೂ ಬರಹಗಾರ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರ್ಗಿ ಪ್ರವೇಶ ನಿರ್ಬಂಧಿಸಿ ಸ್ಥಳೀಯ ಆಡಳಿತ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಸೂಲಿಬೆಲೆಯವರ ಕಲಬುರ್ಗಿ ಪ್ರವೇಶಕ್ಕೆ ಇಂದು ತಡೆಯೊಡ್ಡಿರುವ ಘಟನೆ ಪ್ರಜಾ ಪ್ರಭುತ್ವ ವಿರೋಧಿ ಕ್ರಮವಾಗಿದ್ದು ಕಾಂಗ್ರೆಸ್ ಸರ್ಕಾರದ ಈ ದಮನಕಾರಿ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಕರಾಳ ಇತಿಹಾಸ ನಿರ್ಮಿಸಿದ ಕಾಂಗ್ರೆಸ್, ಕರ್ನಾಟಕದಲ್ಲಿ ಮತ್ತೆ ಅದನ್ನು ನೆನಪಿಸುವ ಕ್ರಿಯೆ ಆರಂಭಿಸಿದೆ ಎಂದು ಕಿಡಿಕಾರಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಬೀದರ್ ಜಿಲ್ಲೆಯ ಬಾಲ್ಕಿಯಿಂದ ಕಲಬುರಗಿಗೆ ತೆರಳುತ್ತಿದ್ದರು. ಕಲಬುರಗಿಯ ಚಿತ್ತಾಪುರದ ಬಾಪೂ ರಾವ್ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿದ್ದ ನಡೆಯಬೇಕಿದ್ದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಪ್ರಯಾಣಿಸುತ್ತಿದ್ದರು. ಪ್ರಧಾನಿ‌ ಮೋದಿಯವರ 10 ವರ್ಷಗಳ ಸಾಧನೆ ಆಡಳಿತದ ಬಗ್ಗೆ ನಡೆಯಬೇಕಿದ್ದ ಕಾರ್ಯಕ್ರಮ ಇದಾಗಿತ್ತು. ಆದರೆ, ಕಾರ್ಯಕ್ರಮಕ್ಕೆ ಅನುಮತಿ‌ ನಿರಾಕರಣೆ ಮಾಡಲಾಗಿದೆ.

SCROLL FOR NEXT