ರಾಜಕೀಯ

'ರೈತ ವಿರೋಧಿ' ನಿಲುವು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಮುಂದು

ರೈತರು ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.

ಬೆಂಗಳೂರು: ರೈತರು ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ರಾಜ್ಯವು ಭೀಕರ ಬರ ಪರಿಸ್ಥಿತಿಯಿಂದ ತತ್ತರಿಸಿದೆ. ರಾಜ್ಯದಲ್ಲಿ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಇದು ಸಾಕಾಗುವುದಿಲ್ಲ ಎಂಬಂತೆ ಸಚಿವ ಶಿವಾನಂದ್ ಪಾಟೀಲ್ ಅವರು ರೈತರ ಕುರಿತು ಅಗೌರವದ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತಿದ್ದಾರೆಂದು ಕಿಡಿಕಾರಿದ್ದಾರೆ.

ಬೆಳಗಾವಿ ವಿಧಾನಮಂಡಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳು ಹೆಸರಿಗೆ ಮಾತ್ರ ಚರ್ಚೆಗಳಾಗಿವೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಈ ಸರ್ಕಾರ ಗಂಭೀರವಾಗಿಲ್ಲ. ರ್ಕಾರ ಒಂದು ಪೈಸೆಯನ್ನೂ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಅಲ್ಪಸಂಖ್ಯಾತರಿಗೆ ಹಣವಿದೆಯೇ ಹೊರತು ರೈತರು ಮತ್ತು ಬಡವರಿಗೆ ಇಲ್ಲ. ಜನರು ಕಾಂಗ್ರೆಸ್‌ ಮೇಲಿನ ಭರವಸೆ, ನಂಬಿಕೆ ಕಳೆದುಕೊಂಡಿದ್ದಾರೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!