ಡಿ.ಕೆ ಶಿವಕುಮಾರ್ 
ರಾಜಕೀಯ

ನನ್ನನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ: ಡಿಸಿಎಂ ಡಿಕೆ ಶಿವಕುಮಾರ್

ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಮಗೆ ನೋಟಿಸ್ ನೀಡಿರುವ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಸಿಎಂ, ಪ್ರಕರಣದ ತನಿಖೆಗೆ ನೀಡಿದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದ ನಂತರವೂ ನೋಟಿಸ್ ನೀಡಲಾಗಿದೆ ಎಂದು ಹೇಳಿದರು.

ನನ್ನ ಮೇಲೆ ದೌರ್ಜನ್ಯ ನಡೆಸಿ ಹಾಗೂ ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಅಂತ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ದೊಡ್ಡ ದೊಡ್ಡವರಿದ್ದಾರೆ, ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಈಗಾಗಲೇ ಕೇಸ್ ವಿತ್‍ಡ್ರಾ ಮಾಡಿದೆ. ಆದರೂ ಯಾವ ಲೆಕ್ಕಾಚಾರದಲ್ಲಿ ಕೊಟ್ಟಿದ್ದಾರೆ ಗೊತ್ತಿಲ್ಲ. ನನಗೆ ನೊಟೀಸ್ ಬಂದಿಲ್ಲ, ನನ್ನ ಸಂಸ್ಥೆಗೆ ಬಂದಿದೆ. ಹೆಂಡತಿ, ಮಕ್ಕಳ ವಿಚಾರಕ್ಕೆಲ್ಲಾ ಬಂದಿದೆ. ಆಮೇಲೆ ವೈಯಕ್ತಿಕವಾಗಿ ನನ್ನ ಬಳಿ ಬರುತ್ತಾರೆ. ಅವರಿಗೆ ಒಳಗೆ ಹಾಕುವ ಆಸಕ್ತಿ ಇದ್ದರೆ ಹಾಕಿಕೊಳ್ಳಲಿ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಯಾವುದಕ್ಕೂ ಹೆದರಲ್ಲ. ಸರ್ಕಾರ ಇದನ್ನ ಈಗಾಗಲೇ ಲೋಕಾಯುಕ್ತಕ್ಕೆ ಕೊಟ್ಟಿದೆ. ಮುಂದಿನ ಪ್ರೊಸೀಜರ್ ಲೋಕಾಯುಕ್ತ ನೋಡಿಕೊಳ್ಳುತ್ತದೆ. ತನಿಖೆ ನಡೆಸುತ್ತೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?