ಡಿವಿ ಸದಾನಂದ ಗೌಡ 
ರಾಜಕೀಯ

ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಕೆಲವರು ಸೇರಿ ಹಲವರಿಂದ ಒತ್ತಡವಿದೆ: ಡಿವಿ ಸದಾನಂದ ಗೌಡ

ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡವಿದೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರು: ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡವಿದೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒತ್ತಡದಲ್ಲಿ ನನ್ನ ನಿರ್ಧಾರವನ್ನು ನಾನು ಹಿಂಪಡೆಯಬಹುದೇ ಎಂಬುದು ಸದ್ಯಕ್ಕೆ ನನಗೆ ತಿಳಿದಿಲ್ಲ. ಚುನಾವಣಾ ರಾಜಕೀಯದಿಂದ ದೂರ ಉಳಿಯಲು ಪ್ರಯತ್ನಿಸಿದ್ದೆ. ಯುವ ಮುಖಗಳು ಬರಬೇಕು. ಈಗ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಕೆಲವರು ಸೇರಿದಂತೆ ಹಲವರಿಂದ ಒತ್ತಡ ಬರುತ್ತಿದೆ ಎಂದರು.

'ನನ್ನ ಮೇಲೆ ಸಾಕಷ್ಟು ಒತ್ತಡವಿದೆ. ಈ ಹಂತದಲ್ಲಿ, ನಾನು ಒತ್ತಡವನ್ನು ನಿವಾರಿಸಬಹುದೇ ಮತ್ತು ನನ್ನ ಹಿಂದಿನ ನಿರ್ಧಾರಕ್ಕೆ ಅಂಟಿಕೊಳ್ಳಬಹುದೇ ಎಂದು ಈಗಲೇ ನಾನು ಹೇಳಲಾರೆ' ಎಂದು ತಿಳಿಸಿದರು.

ಪಕ್ಷಾತೀತವಾಗಿ ಹಲವಾರು ಮುಖಂಡರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ಉಪಮುಖ್ಯಮಂತ್ರಿಗಳು ತಮ್ಮನ್ನು ಭೇಟಿಯಾಗಿದ್ದಾರೆ. 'ಈ ಹಂತದಲ್ಲಿ ನಾನು ಯಾವುದಕ್ಕೂ ಉತ್ತರಿಸಲು ಸಾಧ್ಯವಿಲ್ಲ. ಪಕ್ಷದ ಹಿತಾಸಕ್ತಿ ಮತ್ತು ಕ್ಷೇತ್ರದ ಹಿತಾಸಕ್ತಿ ಬಂದಾಗ ಪಕ್ಷವೇ ಈ ಬಗ್ಗೆ ನಿರ್ಧರಿಸುತ್ತದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ