ನೂತನ ಮೇಯರ್, ಉಪಮೇಯರ್ ಅವರನ್ನು ಅಭಿನಂದಿಸಿದ ಸಚಿವ ಎಂಬಿ ಪಾಟೀಲ್ ಮತ್ತಿತರರು 
ರಾಜಕೀಯ

ವಿಜಯಪುರ: ಬಿಜೆಪಿ ಬಹುಮತ ಹೊಂದಿದ್ದರೂ ಕಾಂಗ್ರೆಸ್ ತೆಕ್ಕೆಗೆ ಮಹಾನಗರ ಪಾಲಿಕೆ!

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೂ ಮೇಯರ್, ಉಪಮೇಯರ್ ಸ್ಥಾನಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ. ಇಂದು ನಡೆದ ಮೇಯರ್ ಚುನಾವಣೆಯಲ್ಲಿ ಮೇಯರ್ ಆಗಿ ಮಹೆಜಬೀನ್ ಅಬ್ದುಲ್ ರಜಾಕ್ ಹೊರ್ತಿ ಹಾಗೂ ಉಪ ಮೇಯರ್ ಆಗಿ ದಿನೇಶ ಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೂ ಮೇಯರ್, ಉಪಮೇಯರ್ ಸ್ಥಾನಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ. ಇಂದು ನಡೆದ ಮೇಯರ್ ಚುನಾವಣೆಯಲ್ಲಿ ಮೇಯರ್ ಆಗಿ ಮಹೆಜಬೀನ್ ಅಬ್ದುಲ್ ರಜಾಕ್ ಹೊರ್ತಿ ಹಾಗೂ ಉಪ ಮೇಯರ್ ಆಗಿ ದಿನೇಶ ಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ 34ನೇ ವಾರ್ಡಿನ ಸದಸ್ಯೆ ಮಹೆಜಬೀನ್ ಹೊರ್ತಿ ಹಾಗೂ ಬಿಜೆಪಿಯಿಂದ 12ನೇ ವಾರ್ಡಿನ ಸದಸ್ಯೆ ರಶ್ಮಿ ನಾಮಪತ್ರ ಸಲ್ಲಿಸಿದ್ದರು. ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಉಪ ಮೇಯರ್ ಸ್ಥಾನಕ್ಕೆ 18ನೇ ವಾರ್ಡಿನ ಸದಸ್ಯ ದಿನೇಶ್ ಹಳ್ಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು.

35 ಸದಸ್ಯರಿರುವ ಮಹಾನಗರ ಪಾಲಿಕೆಗೆ 2022ರ ಅಕ್ಟೋಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 10, ಎಎಂಐಎಂ 2, ಜೆಡಿಎಸ್ 1 ಹಾಗೂ ಪಕ್ಷೇತರರು 5 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು. ಯಾವೊಂದು ಪಕ್ಷಕ್ಕೂ ನಿಚ್ಚಳ ಬಹುಮತ ಇಲ್ಲದೇ ಪಾಲಿಕೆ ಆತಂತ್ರವಾಗಿತ್ತು. ಬಳಿಕ ಮೇಯರ್, ಉಪಮೇಯರ್ ಸ್ಥಾನದ ಮೀಸಲಾತಿ ಪ್ರಶ್ನಿಸಿ ಕೆಲ ಸದಸ್ಯರು ಹೈಕೋರ್ಟ್ ಮೇಟ್ಟಿಲೇರಿದ್ದ ಕಾರಣ 14 ತಿಂಗಳಿನಿಂದ ಚುನಾವಣೆ ನಡೆದಿರಲಿಲ್ಲ. 

ಬಳಿಕ ನಡೆದ ಚುನಾವಣೆಯಲ್ಲಿ ಎಎಂಐಎಂ, ಜೆಡಿಎಸ್ ಮತ್ತು ಪಕ್ಷೇತರರು ಕಾಂಗ್ರೆಸ್ ಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಮಹೆಜಬೀನ್ ಹೂರ್ತಿ ಮೇಯರ್ ಆಗಿ, ದಿನೇಶ್ ಹಳ್ಳಿ ಉಪ ಮೇಯರ್ ಆಗಿ ಆಯ್ಕೆಯಾದರು. 

ನೂತನ ಮಹಾಪೌರರಿಗೆ ಹಾಗೂ ಉಪಮಹಾಪೌರರಿಗೆ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ವಿಜಯಪುರ ಮಹಾನಗರ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?