ಹೆಚ್.ಡಿ ಕುಮಾರಸ್ವಾಮಿ 
ರಾಜಕೀಯ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಬಹಿಷ್ಕಾರಕ್ಕೆ ಕಾರಣ ತಿಳಿಸಿ: ಕಾಂಗ್ರೆಸ್'ಗೆ ಕುಮಾರಸ್ವಾಮಿ ಆಗ್ರಹ

ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಇದೇ ತಿಂಗಳು 22 ರಂದು ಅದ್ಧೂರಿಯಾಗಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ ರಾಜಕೀಯ ನಾಯಕರಲ್ಲಿ ಚರ್ಚೆ ಜೋರಾಗಿದೆ.

ಬೆಂಗಳೂರು: ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಇದೇ ತಿಂಗಳು 22 ರಂದು ಅದ್ಧೂರಿಯಾಗಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ ರಾಜಕೀಯ ನಾಯಕರಲ್ಲಿ ಚರ್ಚೆ ಜೋರಾಗಿದೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಬಹಿಷ್ಕಾರಿಸುತ್ತಿರುವ ಕಾಂಗ್ರೆಸ್ ಕಾರಣ ತಿಳಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ರಾಮಮಂದಿರ ಉದ್ಘಾಟನೆಗೆ ಹೋಗದಿರುವ ನಿರ್ಧಾರ ಅವರ ಪಕ್ಷದ ತೀರ್ಮಾನ ಹೇಳಿದ್ದಾರೆ. ಹೀಗಾಗಿ ಹೋಗದಿರುವುದಕ್ಕೆ ಕಾರಣವನ್ನೂ ಅವರೇ ಹೇಳಬೇಕು ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ದೇಶದ ಜನತೆಯ ಬಹುದಿನಗಳ ಕನಸಾಗಿದೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಭಾರತದ ಹಬ್ಬವಾಗಿದ್ದು, ಈ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾರಣವೇನು ಎಂಬುದುನ್ನು ಕಾಂಗ್ರೆಸ್ ನಾಯಕರು ತಿಳಿಸಬೇಕೆಂದು ತಿಳಿಸಿದರು.

ಇಧೇ ವೇಳೆ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಜೊತೆಗಿನ ಮೈತ್ರಿಗಿಂತ ಬಿಜೆಪಿ ಜೊತೆ ಮೈತ್ರಿಗೆ ಅಜಗಜಾಂತರ ವ್ಯತ್ಯಾಸ ಇದೆ ಎಂದು ಹೇಳಿದರು.

ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಕೇಸರಿ ಪಕ್ಷದ ಜೊತೆ ಯಾವುದೇ ವಿಶ್ವಾಸದ ಕೊರತೆ ಇಲ್ಲ , ಖುಷಿ ಇದೆ, ಬಿಜೆಪಿ ಜೆಡಿಎಸ್ ನದ್ದು ಒಂದು ರೀತಿ ನ್ಯಾಚುರಲ್ ಅಲಾಯನ್ಸ್ ಎನಿಸುತ್ತಿದೆ. ಬಿಜೆಪಿ ಪಕ್ಷದ ಸ್ನೇಹಿತರ ವಿಶ್ವಾಸ ಪಡೆಯಲು, ಸೂಕ್ಷ್ಮವಾಗಿ ಚರ್ಚಿಸಲು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಭೆ ಮಾಡುತ್ತಿದ್ದೇವೆ, ಕೆಲವೆಡೆ ಸ್ಥಳೀಯವಾಗಿ ಎರಡೂ ಪಕ್ಷಗಳ ನಾಯಕರ ಜೊತೆಗಿನ ಸಮಸ್ಯೆ ಬಗೆಹರಿಸುತ್ತೇವೆಂದು ತಿಳಿಸಿದರು.

ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಸ್ಪರ್ಧಿಸುವರೇ ಎಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿ ಜತೆಗಿನ ಸೀಟು ಹಂಚಿಕೆ ನಂತರ ಈ ಬಗ್ಗೆ ತೀರ್ಮಾನಿಸಲಾಗುವುದು' ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT