ದಿನೇಶ್ ಗುಂಡೂರಾವ್, ಅನಂತ್ ಕುಮಾರ್ ಹೆಗಡೆ 
ರಾಜಕೀಯ

ಅನಂತ್ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯಕೆಡಿಸುವ ಕೆಟ್ಟ ಹುಳು ಇದ್ದಂತೆ: ದಿನೇಶ್ ಗುಂಡೂರಾವ್

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಮಗನೇ' ಎಂದು ಸಂಬೋಧಿಸಿರುವ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಮಗನೇ' ಎಂದು ಸಂಬೋಧಿಸಿರುವ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದು, 'ಕುಲವಂ ನಾಲಗೆ ನುಡಿಯಿತು' ಎಂಬಂತೆ ಉತ್ತರ ಕನ್ನಡ ಸಂಸದರ ಸಂಸ್ಕಾರ ಅವರ ಮಾತುಗಳಲ್ಲೇ ತಿಳಿಯುತ್ತದೆ. ವಯಸ್ಸಿನಲ್ಲಿ ಹಾಗೂ ಅನುಭವದಲ್ಲಿ ಸಿದ್ದರಾಮಯ್ಯರ ಮುಂದೆ ಅನಂತ್ ಕುಮಾರ್ ಹೆಗಡೆ ಹುಲ್ಲು ಕಡ್ಡಿಗೂ ಸಮಾನರಲ್ಲ. ಶೋಷಿತ ಸಮುದಾಯದ ದ್ವನಿಯಾಗಿರುವ ಸಿದ್ದರಾಮಯ್ಯರನ್ನು ಮತಾಂಧತೆಯ ವಿಷ ತುಂಬಿಕೊಂಡಿರುವ ಹೆಗಡೆ ಏಕವಚನದಲ್ಲಿ 'ಮಗನೇ' ಎಂದಿರುವುದು ಅವರ ಕೊಳಕು ಮನಸ್ಥಿತಿಯ ಅನಾವರಣ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಅನಂತ್ ಕುಮಾರ್ ಹೆಗಡೆ ಹಿಂದೂ ಸಮಾಜದ ಕಳಂಕವಿದ್ದಂತೆ. ವಯಸ್ಸಿನಲ್ಲಿ ಹಿರಿಯರಾದವರಿಗೆ ಮರ್ಯಾದೆ ಕೊಡುವುದು ನಮ್ಮ ಹಿಂದೂ ಧರ್ಮ ಕಲಿಸಿರುವ ಸಂಸ್ಕಾರ.ಅನಂತ್ ಕುಮಾರ್ ಹೆಗಡೆಯವರು ಯಾವ ಧರ್ಮದಿಂದ ಈ ರೀತಿ ಕೊಳಕು ಭಾಷೆ ಮಾತನಾಡುವ ಸಂಸ್ಕಾರ ಕಲಿತಿದ್ದಾರೆ.? ಬಾಯಿ ಬಿಟ್ಟರೆ ಹೊಡಿ, ಬಡಿ, ಕೊಚ್ಚು, ಕೊಲ್ಲು, ದ್ವೇಷ, ಸೇಡು ಎನ್ನುವ ಅನಂತ್ ಕುಮಾರ್ ಹೆಗಡೆಯಂತಹವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅನಂತ್ ಕುಮಾರ್ ಹೆಗಡೆಯವರೇ, ಸಾರ್ವಜನಿಕವಾಗಿ ಹೇಗೆ ಮಾತಾಡಬೇಕು ಹಾಗೂ ಹೇಗೆ ವರ್ತಿಸಬೇಕು ಎಂಬ ಕನಿಷ್ಟ ಜ್ಞಾನವನ್ನು ದಯವಿಟ್ಟು ಬೆಳೆಸಿಕೊಳ್ಳಿ. ನಿಮ್ಮಂತೆ ಹಿಂದುತ್ವದ ಅಮಲು ತುಂಬಿಕೊಂಡಿರುವ ಕೆಲವರಿಗೆ ಮಾತ್ರ ನಿಮ್ಮ ಅಸಹ್ಯದ ಮಾತುಗಳು ರುಚಿಸಬಹುದೇನೋ.? ಆದರೆ ಪ್ರಜ್ಞಾವಂತ ಹಿಂದೂಗಳು ಯಾವತ್ತಿಗೂ ನಿಮ್ಮ ಮಾತು ಒಪ್ಪಲಾರರು. ಬಸವಣ್ಣ, ಕುವೆಂಪು, ನಾರಾಯಣ ಗುರು ಹಾಗೂ ಕನಕದಾಸರಂತಹ ಅನೇಕ ಮಹಾನ್ ವ್ಯಕ್ತಿಗಳು ಬದುಕಿ ಬಾಳಿದ ನೆಲವಿದು. ನಿಮ್ಮ ಕೊಳಕು ಮಾತುಗಳಿಂದ ಈ ನೆಲದ ಪಾವಿತ್ರ್ಯವನ್ನು ಹಾಳು ಮಾಡಬೇಡಿ‌ ಎಂದು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT