ಈಶ್ವರಪ್ಪ 
ರಾಜಕೀಯ

ರಾಮಮಂದಿರಕ್ಕೆ ಹೋಗಿ ಪಾಪ ತೊಳೆದುಕೊಂಡು ಬನ್ನಿ: ಸಿಎಂ ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಮಿಷಕ್ಕೊಂದು ಮಾತನಾಡುತ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ, ರಾಮ ಎರಡೂ ಇದೆ. ನೀವೇಕೆ ಬಿಜೆಪಿ ರಾಮಮಂದಿರ ಅಂತ ಅಂದುಕೊಳ್ಳುತ್ತೀರಾ? ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಮಿಷಕ್ಕೊಂದು ಮಾತನಾಡುತ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ, ರಾಮ ಎರಡೂ ಇದೆ. ನೀವೇಕೆ ಬಿಜೆಪಿ ರಾಮಮಂದಿರ ಅಂತ ಅಂದುಕೊಳ್ಳುತ್ತೀರಾ? ರಾಮಮಂದಿರಕ್ಕೆ ಹೋಗಿ ನಿಮ್ಮ ಪಾಪ ತೊಳೆದುಕೊಂಡು ಬನ್ನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಅನಂತಕುಮಾರ್ ಹೇಳಿರುವುದರಲ್ಲಿ ತಪ್ಪಿಲ್ಲ. ಏಕೆಂದರೆ ಮಂಡ್ಯದ ಶ್ರೀರಂಗಪಟ್ಟಣ, ಕಾರವಾರ ಜಿಲ್ಲೆಯಲ್ಲಿ ದೇವಸ್ಥಾನ ಒಡೆದು ಮಸೀದಿ ಕಟ್ಟಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಸ್ವಾಗತ ಮಾಡಬೇಕಾ? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಅವರು ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾರೆ. ಒಮ್ಮೆ ಅಯೋಧ್ಯೆಗೆ ಹೋಗಲ್ಲ ಅಂದಿದ್ದರು. ಈಗ ಜ.22ರ ನಂತರ ಹೋಗುತ್ತೇನೆ ಎಂದು ಹೇಳುತ್ತಾರೆ. ನಿಮಿಷಕ್ಕೊಂದು ಮಾತನಾಡುತ್ತಾರೆ. ನಿಮ್ಮ ಹೆಸರಿನಲ್ಲಿ ಸಿದ್ದ ಹಾಗೂ ರಾಮ ಎರಡೂ ಇದೆ, ರಾಮ ಮಂದಿರಕ್ಕೆ ಹೋಗಿ ನಿಮ್ಮ ಪಾಪ ಕಳೆದುಕೊಂಡು ಬನ್ನಿ ಎಂದು ಟಾಂಗ್ ಕೊಟ್ಟರು.

ನೀವೇಕೆ ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮಮಂದಿರ ಅಂದುಕೊಳ್ಳುತ್ತೀರಾ? ನಾವು ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ. ಇಡೀ ವಿಶ್ವದ ಹಿಂದೂಗಳನ್ನು ಒಂದು ಮಾಡಲು ಶ್ರೀರಾಮ ಇರೋದು. ಯಾವ ರೀತಿ ರಾಜಕಾರಣ ಮಾಡುತ್ತಿದ್ದೇವೆ ಎಂಬುದನ್ನು ನೀವು ಹೇಳಿದರೆ, ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆಂದು ತಿರುಗೇಟು ನೀಡಿದರು.

ಇದೇ ವೇಳೆ ಹಾವೇರಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಹಾವೇರಿಯ ಲಾಡ್ಜ್‌ವೊಂದರಲ್ಲಿ ಮಹಿಳೆಯ ಮೇಲೆ ಏಳು ಜನ ಅತ್ಯಾಚಾರ ಮಾಡಿದ್ದಾರೆ. ಇವರನ್ನು ಮನುಷ್ಯರೆಂದು ಕರೆಯಬೇಕಾ? ಯಾವುದೇ ಧರ್ಮದ ಹೆಣ್ಣು ಮಗಳಾಗಲಿ ಇಂತಹ ನೀಚ ಕೃತ್ಯ ನಡೆಯಬಾರದು. ಗೃಹ ಸಚಿವರು ಇಂತಹ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್