ನೂತನ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ
ರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ.
ಬೆಂಗಳೂರು: ರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಆದೇಶ ಹೊರಡಿಸಿರುವುದಾಗಿ ಪಕ್ಷದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಹಾಗೂ ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಅವರನ್ನೂ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ನೇಮಕಗೊಂಡಿದ್ದರೆ, ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೆಕಲ್ಲು, ಸಹ ಕಾರ್ಯದರ್ಶಿಯಾಗಿ ಬಿ.ಹೆಚ್. ವಿಶ್ವನಾಥ ನೇಮಕಗೊಂಡಿದ್ದಾರೆ. ಮಾಜಿ ಶಾಸಕರಾದ ಎಲ್. ನಾಗೇಂದ್ರ, ಸಿಎಸ್. ನಿರಂಜನ್ ಕುಮಾರ್ ಮತ್ತು ಅರುಣ್ ಕುಮಾರ್ ಪೂಜಾರ ಅವರಿಗೂ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.