ಸಂಗ್ರಹ ಚಿತ್ರ 
ರಾಜಕೀಯ

ಲೋಕಸಭಾ ಚುನಾವಣೆ: ಮತಬೇಟೆಗೆ ಬಿಜೆಪಿ ಭರ್ಜರಿ ಸಿದ್ಧತೆ, ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಭೇಟಿ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮತಬೇಟೆಗಾಗಿ ಬಿಜೆಪಿ ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ, ಇದರಂತೆ ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮತಬೇಟೆಗಾಗಿ ಬಿಜೆಪಿ ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ, ಇದರಂತೆ ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆ ಸಿದ್ದತೆ, ಕಾರ್ಯತಂತ್ರಗಳ ಅನುಷ್ಟಾನದ ನಿಟ್ಟಿನಲ್ಲಿ ಮೋದಿ ಹಾಗೂ ಅಮಿತ್ ಶಾ ಅವರ  ಈ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ.

ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ 4 ಲೋಕಸಭೆ ಕ್ಷೇತ್ರಗಳಿಗೆ ಒಂದರಂತೆ ಎಂಟು ಕ್ಲಸ್ಟರ್ ಗಳನ್ನು ರಚಿಸಿದ್ದು, ಪ್ರಧಾನಿ ಮೋದಿ , ಅಮಿತ್ ಶಾ, ಜೆ,ಪಿ ನಡ್ಡಾ ಹಾಗೂ ರಾಜನಾಥ್ ಸಿಂಗ್ ತಲಾ 2 ಕ್ಲಸ್ಟರ್ ಗಳ ಮೇಲ್ವಿಚಾರಣೆ ಮಾಡಲಿದ್ದಾರೆ.

2019 ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಸ್ಥಾನಗಳಲ್ಲಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ ಸ್ಥಾನಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಮತ್ತಷ್ಟು ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲು ಬಿಜೆಪಿ ತಂತ್ರ ರೂಪಿಸುತ್ತಿದೆ.

ಬಿಜೆಪಿ JD(S) ಜೊತೆ ಮೈತ್ರಿ ಮಾಡಿಕೊಂಡ ನಂತರ ಶಾ ಅವರ ಮೊದಲ ಭೇಟಿ ಇದಾಗಿದೆ. ಪಕ್ಷವು ಬಿ ವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮತ್ತು ಆರ್ ಅಶೋಕ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್