ದೇವೇಗೌಡರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು 
ರಾಜಕೀಯ

ಲೋಕಸಮರ: ಶಕ್ತಿ ಕೇಂದ್ರವಾದ ದೊಡ್ಡಗೌಡರ ನಿವಾಸ; ಬಿಜೆಪಿಯ ಎರಡು ಬಣಗಳಿಗೂ ದೇವೇಗೌಡರು ಅನಿವಾರ್ಯ!

ಜೆಡಿಎಸ್- ಬಿಜೆಪಿ ಮೈತ್ರಿಯ ನಂತರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸ ಶಕ್ತಿ ಕೇಂದ್ರವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮ ಪ್ರಾಬಲ್ಯವನ್ನು ಸಾಬೀತು ಪಡಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ನಾಯಕರು  ದೇವೇಗೌಡರ ನಿವಾಸಕ್ಕೆ ಎಡತಾಕುತ್ತಿದ್ದಾರೆ.

ಬೆಂಗಳೂರು: ಜೆಡಿಎಸ್- ಬಿಜೆಪಿ ಮೈತ್ರಿಯ ನಂತರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸ ಶಕ್ತಿ ಕೇಂದ್ರವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮ ಪ್ರಾಬಲ್ಯವನ್ನು ಸಾಬೀತು ಪಡಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ನಾಯಕರು  ದೇವೇಗೌಡರ ನಿವಾಸಕ್ಕೆ ಎಡತಾಕುತ್ತಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಜೆಡಿಎಸ್ ಕೂಡ ಮತದಾರರನ್ನು ಮೆಚ್ಚಿಸಲು ವಿಫಲವಾದ ಬಳಿಕ ಬಿಜೆಪಿ ರಾಷ್ಟ್ರೀಯ ನಾಯಕರು ಸಂಸತ್ ಚುನಾವಣೆಗೆ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದಾರೆ.

ಇದರಿಂದ ಬಿಜೆಪಿಯಲ್ಲಿ ಎರಡು ಗುಂಪುಗಳು ಸೃಷ್ಟಿಯಾಗಿವೆ.  ಬಿ ಎಸ್ ಯಡಿಯೂರಪ್ಪ ಬಣ ಮತ್ತು  ಯಡಿಯೂರಪ್ಪ ವಿರೋಧಿ ಬಣ, ಆದರೆ ಈ ಎರಡು ಬಣಗಳಿಗೂ- ಗೌಡರು ಅನಿವಾರ್ಯವಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಹೈಕಮಾಂಡ್ ಅವರೊಂದಿಗಿನ ದೇವೇಗೌಡರ ಸಂಬಂಧವು ಪಕ್ಷದ ಮೇಲೆ ಪರಿಣಾಮ ಬೀರುತ್ತಿದೆ. ಜೆಡಿಎಸ್ ಪ್ರಾಬಲ್ಯವಿರುವ ಇರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕರ್ನಾಟಕದಲ್ಲಿ ತಾವಿನ್ನೂ ಕಣಕ್ಕಿಳಿಯುವ ಶಕ್ತಿ ಎಂಬುದನ್ನು ಸಾಬೀತುಪಡಿಸಿದ್ದು, ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ನಾಯಕರು ತಮ್ಮ ನಿವಾಸಕ್ಕೆ ಅಲೆಯುತ್ತಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಜೆಡಿಎಸ್ ಕೂಡ ಮತದಾರರನ್ನು ಮೆಚ್ಚಿಸಲು ವಿಫಲವಾದ ಬಳಿಕ ಬಿಜೆಪಿ ರಾಷ್ಟ್ರೀಯ ನಾಯಕರು ಸಂಸತ್ ಚುನಾವಣೆಗೆ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದಾರೆ. ಇದು, ಬಿಜೆಪಿಯ ಎರಡು ಎದುರಾಳಿ ಪಾಳಯಗಳ ನಾಯಕರಿಗೆ , ಅಂದರೆ ಬಿ ಎಸ್ ಯಡಿಯೂರಪ್ಪ ಬಣ ಮತ್ತು ಅವರ ವಿರುದ್ಧ ಶೀತಲ ಸಮರ ನಡೆಸುತ್ತಿರುವವರಿಗೆ ಗೌಡರು ಅನಿವಾರ್ಯ, ಎರಡೂ ಬಣಗಳನ್ನುಒಗ್ಗೂಡಿಸುವ  ಶಕ್ತಿಯಾಗಿ ಬದಲಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಹೈಕಮಾಂಡ್ ಅವರೊಂದಿಗಿನ ಅವರ ಸಂಬಂಧವು ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಜೆಡಿಎಸ್ ತನಗೆ ನೆಲೆ ಇರುವ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಅಭ್ಯರ್ಥಿಗಳ ಆಯ್ಕೆಯಲ್ಲಿ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸಾಧ್ಯತೆ ಇದೆ. ಈ ಭಾಗದ ಬಿಜೆಪಿ ಮುಖಂಡರು ಜೆಡಿಎಸ್ ಮುಖಂಡರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದು, ಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.

ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಕೆಂಡಕಾರುತ್ತಿದ್ದ ಮಾಜಿ ಸಚಿವ ವಿ ಸೋಮಣ್ಣ ಅವರು ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡುವ ಮೊದಲು ಗೌಡರನ್ನು ಭೇಟಿ ಮಾಡಿದರು. ಮೂಲಗಳ ಪ್ರಕಾರ, ಸೋಮಣ್ಣ ಅವರಿಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರಿಂದ ರಕ್ಷಣೆ ನೀಡುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ. ಜೆಡಿಎಸ್‌ನೊಂದಿಗೆ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ.

ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮುಂತಾದವರು ಜೆಡಿಎಸ್ ನಾಯಕರನ್ನು ಭೇಟಿ ಮಾಡಿದ್ದು, ಹೈಕಮಾಂಡ್‌ನಿಂದ ಸಂದೇಶ ಸ್ಪಷ್ಟವಾಗಿದೆ ಎಂದು ಮೂಲಗಳು ತಿಳಿಸಿವೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಕೂಡ ಭಾನುವಾರ ಗೌಡರನ್ನು ಭೇಟಿ ಮಾಡಿದರು.

ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಪಕ್ಷದಲ್ಲಿ ಯಡಿಯೂರಪ್ಪನವರ ಪ್ರಾಬಲ್ಯತೆ ತಗ್ಗಿಸಲು ಹೈಕಮಾಂಡ್ ಗೆ ನೆರವಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನು ಮನಗಂಡ ಕೇಂದ್ರ  ಬಿಜೆಪಿ ನಾಯಕರು ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪನವರ ವಿರೋಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಸಮಬಲ ಸಾಧಿಸಿದ್ದಾರೆ ಎಂದು ಹೇಳಲಾಗಿದೆ.

ಮತ್ತೊಂದೆಡೆ, ಜೆಡಿಎಸ್-ಬಿಜೆಪಿ ಮೈತ್ರಿ ರಾಜ್ಯ ರಾಜಕೀಯದಲ್ಲಿ ಜೆಡಿಎಸ್ ಗೆ ಸಹಾಯ ಮಾಡುತ್ತಿದೆ. ಕುತೂಹಲಕಾರಿಯಾಗಿ, 2006 ರಲ್ಲಿ, ಕುಮಾರಸ್ವಾಮಿ ಅವರು ಎನ್ ಧರಂ ಸಿಂಗ್ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಉರುಳಿಸಿದರು, ಇದರಿಂದ ಜೆಡಿಎಸ್  ಅಸ್ತಿತ್ವಕ್ಕೆ ಸಹಾಯವಾಯಿತು ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT