ಡಿಕೆಶಿವಕುಮಾರ್ 
ರಾಜಕೀಯ

ನಿಗಮ‌ ಮಂಡಳಿ ಪಟ್ಟಿ ಬಿಡುಗಡೆ ಶೀಘ್ರದಲ್ಲೆ; 36 ಶಾಸಕರು, 39 ಕಾರ್ಯಕರ್ತರಿಗೆ ಅವಕಾಶ: ಡಿಕೆ ಶಿವಕುಮಾರ್

ನಿಗಮ ಮಂಡಳಿ ನೇಮಕಾತಿ ಪಟ್ಟಿ ಈಗಾಗಲೇ ತಯಾರಾಗಿದ್ದು ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಈಗಾಗಲೇ ತಯಾರಾಗಿದ್ದು ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಎಲ್ಲವೂ ಅಂತಿಮವಾಗಿದೆ. ಈ ಸೆಕೆಂಡ್​ನಲ್ಲೇ ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ಆಗಬಹುದು. ನಿನ್ನೆಯೂ ಹೇಳಿದ್ದೆ, ಇವತ್ತೂ ಅದನ್ನೇ ಹೇಳುತ್ತಿದ್ದೇನೆ. ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು. 36 ಶಾಸಕರು, 39 ಕಾರ್ಯಕರ್ತರ ಹೆಸರನ್ನು ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಸಚಿವರ ನಿರಾಕರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಪಕ್ಷದ ಹೈಕಮಾಂಡ್​ ಹೇಳುವುದನ್ನು ನಾನು ಕೇಳಬೇಕು, ಸಚಿವರು ಕೇಳಬೇಕಾಗುತ್ತದೆ. ಪಕ್ಷ ಹೇಳಿದಂತೆ ಎಲ್ಲರೂ ಕೇಳಬೇಕು ಎಂದು ಪರೋಕ್ಷವಾಗಿ ಸಚಿವರು ಕೂಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ ಎಂದು ತಿಳಿಸಿದರು.

ನಾಳೆ ಕಾಂಗ್ರೆಸ್ ಭಾರತ್ ಜೋಡೋ ಭವನದಲ್ಲಿ ಮೀಟಿಂಗ್ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ‌ ಅವರು ನಾಳೆ ರಾಜ್ಯಕ್ಕೆ ಬರ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಆ ಸಂದರ್ಭದಲ್ಲಿ ಅಲ್ಲಿ ಇರಬೇಕಾಗುತ್ತದೆ. ಹೀಗಾಗಿ ಸಂಜೆ 4.30ರ ಬಳಿಕ‌ ಮೀಟಿಂಗ್ ನಡೆಯಲಿದೆ. ಲೋಕಸಭಾ ಚುನಾವಣೆ ಬಗ್ಗೆ ಮೊದಲ ಮೀಟಿಂಗ್ ಇದು. ಈಗಾಗಲೇ ವೀಕ್ಷಕರು ಲಿಸ್ಟ್ ‌ಕೊಟ್ಟಿದ್ದಾರೆ. ಅದರ ಬಗ್ಗೆ ಚರ್ಚೆ ಮಾಡುತ್ತೇವೆ?  ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT