ಪ್ರಿಯಾಂಕ್ ಖರ್ಗೆ 
ರಾಜಕೀಯ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಕರ ಜೊತೆ ಬಿಜೆಪಿಗರ ನಂಟು: ಪ್ರಿಯಾಂಕ್ ಖರ್ಗೆ ಆರೋಪ

ಹೈದ್ರಾಬಾದ್ ನಲ್ಲಿ ಪತ್ತೆಯಾದ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೋಪಿಸಿದ್ದಾರೆ.

ಬೆಂಗಳೂರು: ಹೈದ್ರಾಬಾದ್ ನಲ್ಲಿ ಪತ್ತೆಯಾದ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಈ ಪ್ರಕರಣದ ಎಫ್ಐಆರ್ ಪ್ರಕಾರ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗುತ್ತದೆ. ಇವರಿಬ್ಬರೂ ಪೊಲೀಸರ ವಶದಲ್ಲಿದ್ದು,  ಬಿಜೆಪಿಯ ಸಕ್ರಿಯ ಕಾರ್ಯಕರ್ತರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಇವರು ಯೋಗಿ ಆದಿತ್ಯನಾಥ್ ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ. ಇಷ್ಟೇಲ್ಲಾ ಒಡನಾಟ ಇಟ್ಟುಕೊಂಡಿರುವವರ ಜತೆ ರಾಜ್ಯ ಬಿಜೆಪಿ ನಾಯಕರು ಸಂಪರ್ಕ ಹೊಂದಿರುವುದಿಲ್ಲವೇ? ಎಂದು ಪ್ರಶ್ನಿಸಿದರು. 

ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜತೆ ಒಡನಾಟ ಇಟ್ಟುಕೊಂಡಿದ್ದಾರೆ. ನಮ್ಮ ಸರ್ಕಾರ ಈ ವಿಚಾರದಲ್ಲಿ ಎಚ್ಛೆತ್ತು ಎಫ್ ಐಆರ್ ದಾಖಲಿಸಲಾಗಿದೆ. ನಮ್ಮ ಅಧಿಕಾರಿಗಳು ಹೈದರಾಬಾದ್ ನಲ್ಲಿದ್ದು, ತೆಲಂಗಾಣ ಉಪಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದೇವೆ ಎಂದು ತಿಳಿಸಿದರು. 

ಬಿಜೆಪಿ ಶಾಸಕರಾಗಿದ್ದ ಮಾಡಾಲ್ ವಿರುಪಾಕ್ಷಪ್ಪ ಅವರ ಮನೆಯಲ್ಲಿ 7 ಕೋಟಿ ಹಣ ಸಿಕ್ಕಿತ್ತು. ಅವರು ಇದೇ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದರು. ಆ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದರೂ ಅವರ ಪುತ್ರನ ಹೆಸರು ಹಾಗೇ ಇದೆ. ಈ ಅಕ್ರಮದಲ್ಲೂ ಅವರ ಕೈವಾಡ ಇಲ್ಲವೇ? ಈ ಬಗ್ಗೆ ತನಿಖೆಯಾಗಬೇಕಲ್ಲವೇ? ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರ ನೀಡಬೇಕು. ಇವರನ್ನು ಕೂಡ ರಾಮಭಕ್ತರು ಎಂದು ಹೇಳಿ ಬೀದಿಗಿಳಿದು ಹೋರಾಟ ಮಾಡುತ್ತೀರಾ? ಅಥವಾ ಇವರನ್ನು ಪಕ್ಷದಿಂದ ವಜಾ ಮಾಡಿ ರಾಜ್ಯದ ಜನರಿಗೆ ಉತ್ತರ ನೀಡುತ್ತೀರಾ? ಎಂದು ಕೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್, ಘರ್ಷಣೆ: 'ಸಾವನ್ನಪ್ಪಿದ ವ್ಯಕ್ತಿಗೆ ತಗುಲಿದ ಗುಂಡು ಪೊಲೀಸರ ಬಂದೂಕಿನದ್ದಲ್ಲ..' ಎಸ್‌ಪಿ ವರ್ಗಾವಣೆಗೆ ಕಾರಣ ಕೊಟ್ಟ G Parameshwara

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video

Andaman Express: 110 ರೂ ದರ ಊಟಕ್ಕೆ 130 ರೂ.. : ಪ್ರಶ್ನಿಸಿದ ಪ್ರಯಾಣಿಕನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿತ, Video Viral

'ಕಾಲಿಗೆ ಪೆಟ್ಟಾಗಿದೆ.. ಪ್ಲೀಸ್ ಚಿಕಿತ್ಸೆ ಕೊಡಿ': ಆಸ್ಪತ್ರೆಗೆ ಬಂದು ಚಿಕಿತ್ಸೆ ಕೇಳಿ ಪಡೆದ ಬೀದಿ ನಾಯಿ, Video Viral

SCROLL FOR NEXT