ದೇವೇಗೌಡ 
ರಾಜಕೀಯ

ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದಾರೆ: ಎಚ್‌ಡಿ ದೇವೇಗೌಡ

ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದರು.

ಬೇಲೂರು: ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದರು.

ಬೇಲೂರಿನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ವೈಯಕ್ತಿಕ ಹಿತಾಸಕ್ತಿಯಿಂದ ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. ದೇಶದ 150 ಕೋಟಿ ಜನರಿಗಾಗಿ ಮೋದಿಜತೆ ಸಂಬಂಧ ಬೆಳೆಸಿದ್ದೇನೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಎಷ್ಟುಸೀಟು ಕೊಡುತ್ತಾರೆ ಎಂಬುದು ಮುಖ್ಯವಲ್ಲ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವುದು ಮುಖ್ಯ. ಮೋದಿಯವರು 10 ವರ್ಷದಲ್ಲಿ ಅಯೋಧ್ಯೆ, ಕಾಶಿ ಗಂಗಾನದಿಯ ಸ್ವರೂಪವನ್ನು ಬದಲಿಸಿ ರಸ್ತೆಗಳನ್ನು ಕ್ರಾಂತಿಕಾರಿ ಮಾಡಿದ್ದಾರೆ. ಸಮಾಜದ ಎಲ್ಲಾ ವರ್ಗಗಳಿಗೆ ನ್ಯಾಯ ಒದಗಿಸುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದಾರೆಂದು ಕೊಂಡಾಡಿದರು.

ಬಳಿಕ ಮೋದಿಯನ್ನು ಬೆಂಬಲಿಸುವಂತೆ ಜೆಡಿಎಸ್ ಕಾರ್ಯಕರ್ತರನ್ನು ಒತ್ತಾಯಿಸಿದ ಅವರು, ವಿಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿರುವ ನಾಯಕರಿಗೆ ಮೋದಿಯವರಿಗಿರುವ ಸಾಮರ್ಥ್ಯವಿಲ್ಲ. ಕಾಂಗ್ರೆಸ್ ಮತ್ತು ಅದರ ನಾಯಕರ ಬಗ್ಗೆ ಮಾತನಾಡಲು ಸಾಕಷ್ಟು ಇದೆ, ನಮ್ಮ ಪಕ್ಷವನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ನಾನು ವಿಶ್ರಮಿಸುವುದಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ಸಾಮಾನ್ಯ ಜನರು ಮತ್ತು ರೈತರ ಹಿತಾಸಕ್ತಿಗಳಿಗಾಗಿ ಹೋರಾಟವನ್ನು ಮುಂದುವರೆಸುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಇಂದು ಗಾಂಧಿ, ನೆಹರು ಕಾಂಗ್ರೆಸ್‌ ಆಗಿ ಉಳಿದಿಲ್ಲ, ಬೇಕಾದಾಗ ಉಪಯೋಗಿಸಿಕೊಂಡು ಬೇಡ ಎಂದಾಗ ಕಸದಂತೆ ಎಸೆಯುತ್ತಾರೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಗ್ಯಾರಂಟಿಗಳು ಎಲ್ಲಿ ಹೋಗುತ್ತವೆಯೋ ತಿಳಿಯದು ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!