ಸಂಗ್ರಹ ಚಿತ್ರ 
ರಾಜಕೀಯ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ರಜೆ ಘೋಷಿಸದ ಸಿಎಂ ವಿರುದ್ಧ ಬಿಜೆಪಿ ತೀವ್ರ ಕಿಡಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ದಿನದಂದು ರಾಜ್ಯ ಸರ್ಕಾರಿ ನೌಕರರಿಗೆ ರಜೆ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ತೀವ್ರ ಕಿಡಿಕಾರಿದೆ.

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ದಿನದಂದು ರಾಜ್ಯ ಸರ್ಕಾರಿ ನೌಕರರಿಗೆ ರಜೆ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ತೀವ್ರ ಕಿಡಿಕಾರಿದೆ.

ರಜೆ ಘೋಷಿಸದಿರುವ ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಇವರಿಬ್ಬರ ನಿರ್ಧಾರ ದುರ್ಯೋಧನನಂತೆಯೇ ಇದೆ ಎಂದು ಎಂದು ಹೇಳಿದ್ದಾರೆ.

ರಜಾ ಘೋಷಿಸದಿರುವ ಈ ಆಲೋಚನೆ ಸರ್ಕಾರಕ್ಕೆ ಹೇಗೆ ಬರುತ್ತದೆ ಎಂದು ನನಗೆ ತಿಳಿದಿಲ್ಲ. ಅವರ ನಿರ್ಧಾರ ದುರ್ಯೋಧನನ ನಿರ್ಧಾರದಂತಿದೆ ಎಂದು ತಿಳಿಸಿದ್ದಾರೆ.

ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಮಾತನಾಡಿ, ಇದು ರಾಮಭಕ್ತನ ನಿರ್ಧಾರವಲ್ಲ, ರಹೀಮ್ ಭಕ್ತನ ನಿರ್ಧಾರ ಎಂದಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ''ಹಿಂದೂಗಳಿಗೆ ನೋವಾಗುತ್ತದೆ ಎಂಬ ಅಂಶವನ್ನು ಈ ಸರಕಾರ ಪರಿಗಣಿಸಿಲ್ಲ. ಈ ಮಹತ್ವದ ಕಾರ್ಯಕ್ರಮಕ್ಕೆ ಗೌರವವನ್ನು ನೀಡುತ್ತಿಲ್ಲ. ಕೆಲವು ಮುಸ್ಲಿಮರು ಕೂಡ ನಾಳೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆಂದು ಹೇಳಿದ್ದಾರೆ.

ರಾಜಕೀಯ ವಿಶ್ಲೇಷಕ ಬಿ.ಎಸ್.ಮೂರ್ತಿ ಅವರು ಮಾತನಾಡಿ, “ಇದು ಸಾಮಾನ್ಯ ಧಾರ್ಮಿಕ ಕಾರ್ಯಕ್ರಮಕ್ಕಿಂತ ಹೆಚ್ಚಾಗಿ ಬಿಜೆಪಿ-ಸಂಘ ಪರಿವಾರದ ಕಾರ್ಯಕ್ರಮವಾಗಿದೆ ಎಂಬಂತೆ ತೋರುತ್ತಿದೆ. ರಾಜ್ಯ ಮುಖ್ಯಮಂತ್ರಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬಿಟ್ಟು ಆವರು ಆಹ್ವಾನ ಪತ್ರಿಕೆಗಳನ್ನು ನೀಡಿದ್ದಾರೆ. ಬಿಜೆಪಿಯ ಹೊಸ ಮಿತ್ರಪಕ್ಷ ಜೆಡಿಎಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ. ಎಲ್ಲರೂ ಭಾಗವಹಿಸಬೇಕೆಂದು ಅವರು ಬಯಸಿದರೆ, ಕೇಂದ್ರ ಸರ್ಕಾರವು ರಾಷ್ಟ್ರೀಯ ರಜಾದಿನವನ್ನು ಘೋಷಿಸಬಹುದಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT