ಸಿಎಂ ಸಿದ್ದರಾಮಯ್ಯ 
ರಾಜಕೀಯ

ಎಲ್ಲರನ್ನೂ ತೃಪ್ತಿಪಡಿಸುವುದು ಕಷ್ಟ: ನಿಗಮ ಮಂಡಳಿ ನೇಮಕಾತಿ ಬಗ್ಗೆ ಸಿಎಂ ಸಿದ್ದರಾಮಯ್ಯ

ನಿಗಮ, ಮಂಡಳಿಗಳಿಗೆ ನೇಮಕಾತಿ ಮಾಡುವ ವಿಷಯವಾಗಿ ಕಾಂಗ್ರೆಸ್ ನಾಯರಲ್ಲೇ ಅಸಮಾಧಾನ ಭುಗಿಲೆದ್ದಿದೆ. 

ಬೆಂಗಳೂರು: ನಿಗಮ, ಮಂಡಳಿಗಳಿಗೆ ನೇಮಕಾತಿ ಮಾಡುವ ವಿಷಯವಾಗಿ ಕಾಂಗ್ರೆಸ್ ನಾಯರಲ್ಲೇ ಅಸಮಾಧಾನ ಭುಗಿಲೆದ್ದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಎಲ್ಲರ ಸಲಹೆಗಳನ್ನೂ ಆಲಿಸಿ, ಸಮಾಧಾನಪಡಿಸುವುದು ಕಷ್ಟ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ,  ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರ ಹುದ್ದೆಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಕಸರತ್ತು ಆರಂಭಿಸಿದೆ. ಆದರೆ, ಕೆಲವು ಭಿನ್ನಾಭಿಪ್ರಾಯಗಳಿಂದಾಗಿ ಪಕ್ಷವು ಇನ್ನೂ ಹೆಸರುಗಳನ್ನು ಅಂತಿಮಗೊಳಿಸಿಲ್ಲ.

ನಾವು ವಿವಿಧ ಮಂಡಳಿಗಳು ಮತ್ತು ನಿಗಮಗಳಲ್ಲಿ (ಪಕ್ಷದ ಹೈಕಮಾಂಡ್‌ಗೆ) ನೇಮಕಾತಿಗಾಗಿ ಹೆಸರುಗಳನ್ನು ಶಿಫಾರಸು ಮಾಡಿದ್ದೇವೆ. ಇದರಲ್ಲಿ ಈಗ ನಮಗೆ ಯಾವುದೇ ಪಾತ್ರವಿಲ್ಲ ಎಂದು ಸಿದ್ದರಾಮಯ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಅವರ ಪ್ರಕಾರ, ಶಿಫಾರಸು ಮಾಡಿದ ಶಾಸಕರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.

ಈ ಮಂಡಳಿಗಳು ಮತ್ತು ನಿಗಮಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ನೇಮಿಸುವ ಬಗ್ಗೆ, ನಾನು, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ವಿಸ್ತೃತ ಚರ್ಚೆ ನಡೆಸಿ ನಂತರ ಪಕ್ಷದ ಹೈಕಮಾಂಡ್ ಅನುಮೋದನೆಗಾಗಿ ಪಟ್ಟಿಯನ್ನು ಸುರ್ಜೇವಾಲಾ ಅವರಿಗೆ ನೀಡಲಾಗಿದೆ.  ಪಟ್ಟಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸಹಿಯಾಗಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಂಡಳಿ ಮತ್ತು ನಿಗಮಗಳ ಅಧ್ಯಕ್ಷರ ನೇಮಕಕ್ಕೂ ಮುನ್ನ ತಮ್ಮ ಸಲಹೆ ಕೇಳಿಲ್ಲ ಎಂಬ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಎಲ್ಲರ ಸಲಹೆಗೆ ಕಿವಿಗೊಡುವುದು ಕಷ್ಟ. ಅವರ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

SCROLL FOR NEXT