ಖರ್ಗೆ ಆಪ್ತ ರುದ್ರಯ್ಯ ಬಿಜೆಪಿ ಸೇರ್ಪಡೆ 
ರಾಜಕೀಯ

ತವರು ಜಿಲ್ಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಬಿಗ್ ಶಾಕ್: ಎಐಸಿಸಿ ಅಧ್ಯಕ್ಷರ ಆಪ್ತ ಬಿಜೆಪಿ ಸೇರ್ಪಡೆ!

ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಕಾಂಗ್ರೆಸ್ ​ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಲೋಕಸಭೆ ಚುನಾವಣೆಗೆ ದೇಶದಲ್ಲಿ ಅಖಾಡ ಸಿದ್ದವಾಗುತ್ತಿದೆ. ಈ ಬಾರಿ ಶತಾಯಗತಾಯ ಬಿಜೆಪಿಯನ್ನು ಹಣಿಯಲು ವಿರೋಧ ಪಕ್ಷಗಳು ಒಂದಾಗಿ ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿವೆ. ಈ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಆಯ್ಕೆ ಮಾಡಲಾಗಿದೆ. ಆದರೆ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ತವರು ಕ್ಷೇತ್ರದಲ್ಲೇ ಬಿಗ್​​ ಶಾಕ್ ನೀಡಲಾಗಿದೆ. ​ಅದು ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬುಧವಾರ ಬೆಳಿಗ್ಗೆ 11:30ಕ್ಕೆ ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಂಸದ ಎಸ್. ಮುನಿಸ್ವಾಮಿ, ಶಾಸಕ ಡಾ. ಶಿವರಾಜ್ ಪಾಟೀಲ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ದಲಿತ ಸಮುದಾಯದ ನಾಯಕರಾಗಿರುವ ರುದ್ರಯ್ಯ ಅವರು ನೀರಾವರಿ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಕಾಂಗ್ರೆಸ್​ ಸೇರ್ಪಡೆಯಾಗಿದ್ದರು. 2023ರ ವಿಧಾನಸಭಾ ಚುನಾವಣೆ ವೇಳೆ ಲಿಂಗಸೂಗೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದರು.

ಆದರೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾರಣ ಪಕ್ಷೇತರರಾಗಿ ಸ್ಫರ್ದಿಸಿದ್ದರು. ಇನ್ನು ತಮಗೆ ಟಿಕೆಟ್​ ತಪ್ಪಲು ಮಲ್ಲಿಕಾರ್ಜುನ್​ ಖರ್ಗೆ ಅವರೇ ಕಾರಣ ಎಂದು ಕಾಂಗ್ರೆಸ್​ ತೊರೆಯಲು ನಿರ್ಧರಿಸಿದ್ದಾರೆ ಮಾತುಗಳು ಕೇಳಿಬಂದಿದ್ದವು. ಆದರೆ ಯಾವ ಪಕ್ಷಕ್ಕೆ ಸೇರುತ್ತಾರೆ ಎಂಬುವುದು ಖಚಿತಪಡಿಸಿರಲಿಲ್ಲ. ಇದೀಗ ಕಮಲಪಾಳಯ ಸೇರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT