ಸಂಗ್ರಹ ಚಿತ್ರ 
ರಾಜಕೀಯ

ಲೋಕಸಭಾ ಚುನಾವಣೆಗೆ ಸಿದ್ಧತೆ: ಜನವರಿ 27ಕ್ಕೆ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿ ಜನವರಿ 27 ರಂದು ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿ ಜನವರಿ 27 ರಂದು ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು, ಜನವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು.

ಬೆಳಗ್ಗೆ 9.30ರಿಂದ ಸಂಜೆ 5.30ರವರೆಗೆ ನಡೆಯಲಿರುವ ಸಭೆಗೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಆಗಮಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆಂದು ತಿಳಿಸಿದರು.

ಸಭೆಯಲ್ಲಿ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಚುನಾವಣಾ ಸಿದ್ಧತೆಗಳು ಮತ್ತು ಪ್ರಚಾರಗಳ ಕುರಿತು ಚರ್ಚಿಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಈ ಹಿಂದೆ, ಬಿಜೆಪಿ ಜನವರಿ 19 ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿತ್ತು. ಆದರೆ,  ಪ್ರಧಾನಿ ಮೋದಿಯವರ ಬೆಂಗಳೂರು ಭೇಟಿಯ ಹಿನ್ನೆಲೆಯಲ್ಲಿ ಸಭೆಯನ್ನು ರದ್ದುಗೊಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

IPL 2026: Shreyas Iyer ಗೆ ಮತ್ತೆ ದಂಡ.. ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

SCROLL FOR NEXT