ಜಗದೀಶ್ ಶೆಟ್ಟರ್ 
ರಾಜಕೀಯ

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ತೆಕ್ಕೆಗೆ: ಮಾಜಿ ಸಿಎಂ ಕರೆತರುವಲ್ಲಿ ವಿಜಯೇಂದ್ರ ಪ್ರಮುಖ ಪಾತ್ರ!

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಬಿಜೆಪಿ ತೆಕ್ಕೆಗೆ ತರುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಬಿಜೆಪಿ ತೆಕ್ಕೆಗೆ ತರುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ತಾವು ವಾಪಾಸಾಗಬೇಕೆಂದು ಬಯಸಿದ್ದರು, ಆದರೆ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ ನಂತರವೇ ಪ್ರಕ್ರಿಯೆಯು ವೇಗ ಪಡೆದುಕೊಂಡಿತು ಎಂದು ಶೆಟ್ಟರ್ ಹೇಳಿದರು.

ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ, ಬಿಜೆಪಿಗೆ ಮರಳುವ ಸಂಪೂರ್ಣ ಪ್ರಕ್ರಿಯೆ ನಾಲ್ಕು ಗಂಟೆಗಳಲ್ಲಿ ನಡೆದಿಲ್ಲ, ಆದರೆ ಕಳೆದ ಕೆಲವು ತಿಂಗಳುಗಳಿಂದ ಪ್ರಕ್ರಿಯೆ ನಡೆಯುತ್ತಿತ್ತು ಎಂದಿದ್ದಾರೆ.

ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ನಂತರ, ವಿಜಯೇಂದ್ರ ಮತ್ತು ಮಾಜಿ ಸಿಎಂ ಯಡಿಯೂರಪ್ಪನವರನ ನನ್ನನ್ನು ಪಕ್ಷಕ್ಕೆ ಮರಳಿ ಕರೆತರುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದರು ಎಂದು ಅವರು ಹೇಳಿದರು, ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರು ಯಾವಾಗಲೂ ಅವರು ಹಿಂತಿರುಗಬೇಕೆಂದು ಬಯಸುತ್ತಿದ್ದರು ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಶೆಟ್ಟರ್‌ ಬಿಜೆಪಿ ನಾಯಕರನ್ನು ಟೀಕಿಸಿದ್ದರು. ಈಗ ಅದನ್ನು ಹೇಗೆ ನೋಡುತ್ತೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶೆಟ್ಟರ್, ಬಿಜೆಪಿಯಲ್ಲಿ ಆಗ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದೇನೆ ಮತ್ತು ಸುಧಾರಣೆಗಳ ಬಗ್ಗೆ ಆಶಾವಾದಿಗಳಾಗಿರಬೇಕು ಮತ್ತು ವಿಷಯಗಳನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಭಾವಿಸಬಾರದು ಎಂದು ಹೇಳಿದರು.

ಪಕ್ಷವನ್ನು ಬಲಪಡಿಸಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ ಎಂದ ಅವರು, ರಾಜ್ಯದಲ್ಲಿ ಪ್ರವಾಸ ಮಾಡಿ ಬಿಜೆಪಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವಂತೆ ಮಾಡುತ್ತೇನೆ ಎಂದರು. ಶೆಟ್ಟರ್ ಅವರು ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಮರಳಿದ್ದು, ಪಕ್ಷದ ನಾಯಕರ ನಿರ್ದೇಶನದಂತೆ ಕೆಲಸ ಮಾಡುವುದಾಗಿ ಹೇಳಿದರು, ಹಿರಿಯ ನಾಯಕರಾದ ಅವರಿಗೆ ಸೂಕ್ತ ಗೌರವ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಗುರುವಾರ ಶೆಟ್ಟರ್ ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಕೇಂದ್ರ ನಾಯಕರನ್ನು ಭೇಟಿ ಮಾಡಿದರು. ಬಿಜೆಪಿ ನಮ್ಮ ಮನೆ. ವಿಧಾನಸಭೆ ಚುನಾವಣೆ ವೇಳೆ ನಡೆದ ಕೆಲ ಘಟನೆಗಳಿಂದಾಗಿ ಕಾಂಗ್ರೆಸ್‌ ಸೇರಿದ್ದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಬಲಪಡಿಸಿದ್ದಾರೆ ಮತ್ತು ನಾಗರಿಕರು ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕೆಂದು ಮಾಜಿ ಸಿಎಂ ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯ ಸ್ಥಳವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ಸಹೋದ್ಯೋಗಿಗಳೊಂದಿಗೆ ಶುಕ್ರವಾರ ಪರಿಶೀಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT