ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಮುಡಾ ಹಗರಣದಲ್ಲಿ ಆಧಾರ ರಹಿತ ಆರೋಪ, ಕುಮಾರಸ್ವಾಮಿ ಒಬ್ಬ ಹುಚ್ಚ: ಡಿಕೆ ಶಿವಕುಮಾರ್

ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ.

ಕುಮಾರಸ್ವಾಮಿ, ಡಿಕೆಶಿ ಸಾಂದರ್ಭಿಕ ಚಿತ್ರ
Nagaraja AB
Updated On : 5 Jul 2024, 9:20 pm

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ ಎಂಬ ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ‌ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಪತ್ನಿ ಹೆಸರಿಗೆ ನಿವೇಶನ ಹಂಚಿಕೆಯಾಗಿರುವ ಮೈಸೂರಿನ ಮೂಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಈ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದರು.

Also Read

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್‌ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಸಿಡಿ ಫ್ಯಾಕ್ಟರಿ ನಂತರ ಈಗ ಮುಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ “ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ತಿರುಗೇಟು ನೀಡಿದರು.

Advertisement

Advertisement

ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ ಸೂಚನೆ ನೀಡಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಅದೇ ರೀತಿಯ ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments