ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

ಸಿಎಂ–ಡಿಸಿಎಂ ಹುದ್ದೆ ಫೈಟ್: ಉಪ ಚುನಾವಣೆ ಸಿದ್ಧತೆ ನಡುವಲ್ಲೇ 'ಕೈ' ಪಡೆಗೆ ಹೊಸ ತಲೆನೋವು!

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯವನ್ನು ಬಿಜೆಪಿ-ಜೆಡಿಎಸ್ ತನ್ನ ಲಾಭಕ್ಕೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ, ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಠಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಈಗ ಒಡೆದ ಮನೆಯಾಗಿದ್ದು, ಈ ಗೊಂದಲಗಳ ಕರಿನೆರಳು ಮುಂಬುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯವನ್ನು ಬಿಜೆಪಿ-ಜೆಡಿಎಸ್ ತನ್ನ ಲಾಭಕ್ಕೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನು ಸೋಲಿಸಲು ಸಿದ್ದರಾಮಯ್ಯ ಪಾತ್ರವಿದೆ ಎಂದು ಈಗಾಗಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಆರೋಪಿಸಿದ್ದಾರೆ.

ಸುರೇಶ್ ಸೋಲಿನಿಂದಾಗಿ ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಹತಾಶರಾಗಿದ್ದು, ಇದೀಗ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಪಾಳಯದಲ್ಲಿ ಜಟಾಪಟಿ ಏರ್ಪಟ್ಟಿರುವುದರಿಂದ ಪಕ್ಷದೊಳಗೆ ಗೊಂದಲ ಉಂಟಾಗಿದೆ. ಇದು ಅವರ ಮನೋಸ್ಥೈರ್ಯವನ್ನು ಮತ್ತಷ್ಟು ಕುಗ್ಗಿಸುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

ಶಿವಕುಮಾರ್ ಅಥವಾ ಸುರೇಶ್ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಿದರೆ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಮನಃಪೂರ್ವಕವಾಗಿ ತೊಡಗಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಇದಲ್ಲದೆ ಸಿಎಂ ಹಾಗೂ ಡಿಸಿಎಂ ತಿಕ್ಕಾಟವು ಶಿಗ್ಗಾಂವಿ ಉಪಚುನಾವಣೆ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮಂಗಳೂರು-ಉಡುಪಿ ಸ್ಥಳೀಯ ಸಂಸ್ಥೆಗಳಿಂದ ಎಂಎಲ್‌ಸಿ ಸ್ಥಾನಕ್ಕೆ ನಡೆದ ಉಪಚುನಾವಣೆಗೆ ಯಾವುದೇ ಅಲ್ಪಸಂಖ್ಯಾತ ಮುಖಂಡರನ್ನು ಸಮಿತಿಗೆ ಸೇರಿಸಿಕೊಳ್ಳದ ಕಾರಣ, ಅಲ್ಪಸಂಖ್ಯಾತರು ಈಗಾಗಲೇ ಡಿಕೆ.ಶಿವಕುಮಾರ್ ಅವರ ಮೇಲೆ ಅಸಮಧಾನಗೊಂಡಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿ ಸಮಿತಿಯಲ್ಲಿ ಡಿಕೆಶಿಯವರಿಗೆ ಸ್ಥಾನಕ್ಕೆ ವಿರೋಧ ವ್ಯಕ್ತಪಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಆದರೆ, ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಇ.ತುಕಾರಾಂ ಗೆದ್ದಿದ್ದನ್ನು ಪಕ್ಷ ಗಂಭೀರವಾಗಿ ಪರಿಗಣಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!