ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ 
ರಾಜಕೀಯ

ಏಟಿಗೆ ಎದುರೇಟು: ಪ್ರತಿಭಟನೆಗಿಳಿದ ಬಿಜೆಪಿಗೆ ತಿರುಗೇಟು ನೀಡಲು 'ಕೈ' ಪಡೆ ಮುಂದು!

ಕಾಂಗ್ರೆಸ್‌ ನಾಯಕರ ತೇಜೋವಧೆ ಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಜುಲೈ 12ರಂದು ಬೆಳಿಗ್ಗೆ 10ಕ್ಕೆ ಮುಡಾ ಮುತ್ತಿಗೆ ಹಾಕುವುದಾಗಿ ಹೇಳಿದೆ. ಸಾವಿರಾರು ಜನರನ್ನು ಸೇರಿಸಿದರೆ ಅಷ್ಟೇ ಸಂಖ್ಯೆಯಲ್ಲಿಯೇ ಪಕ್ಷದ ಕಾರ್ಯಕರ್ತರು, ನಾಗರಿಕರು ಬಿಜೆಪಿಗರನ್ನು ಸುತ್ತುವರಿಯಲಿದ್ದಾರೆ...

ಮೈಸೂರು: ಬಹುಕೋಟಿ ಹಗರಣದ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಮುತ್ತಿಗೆ ಹಾಕಲು ನಿರ್ಧರಿಸಿರುವ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಮುಂದಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಮುತ್ತಿಗೆ ಹಾಕಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ ಬೆನ್ನಲ್ಲೇ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕೂಡ ಪ್ರತಿತಂತ್ರ ರೂಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಬಿಜೆಪಿ ಮುಖಂಡರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮುತ್ತಿಗೆ ಹಾಕಲು ಮುಂದಾದರೆ ನಾವು ಅವರಿಗೆ ಪ್ರತಿ ಮುತ್ತಿಗೆ ಹಾಕುತ್ತೇವೆಂ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕರ ತೇಜೋವಧೆ ಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಜುಲೈ 12ರಂದು ಬೆಳಿಗ್ಗೆ 10ಕ್ಕೆ ಮುಡಾ ಮುತ್ತಿಗೆ ಹಾಕುವುದಾಗಿ ಹೇಳಿದೆ. ಸಾವಿರಾರು ಜನರನ್ನು ಸೇರಿಸಿದರೆ ಅಷ್ಟೇ ಸಂಖ್ಯೆಯಲ್ಲಿಯೇ ಪಕ್ಷದ ಕಾರ್ಯಕರ್ತರು, ನಾಗರಿಕರು ಬಿಜೆಪಿಗರನ್ನು ಸುತ್ತುವರಿಯಲಿದ್ದಾರೆಂದು ತಿಳಿಸಿದರು.

20 ದಿನಗಳಿಂದ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಬಿಜೆಪಿಗರು ಮಾಡುತ್ತಿದ್ದಾರೆ. ಅವರನ್ನು ವಿಧಾನಸಭಾ ಚುನಾವಣೆಯಲ್ಲಿ ಜನರು ತಿರಸ್ಕರಿಸಿದ್ದರು. ಕಾಂಗ್ರೆಸ್‌ ಟೀಕಿಸಲು ಯಾವುದೇ ಅಸ್ತ್ರ ಇರಲಿಲ್ಲ. ಹೀಗಾಗಿಯೇ, ವಿಚಾರವೇ ಇಲ್ಲದ ಮುಡಾ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಹರಿಹಾಯ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ತೇಜೋವಧೆಯನ್ನು ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಲೋಪ ಆಗಿರುವುದು ಕಂಡುಬಂದರೆ, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರೆ, ಪ್ರಭಾವ ಬಳಸಿದ್ದರೆ ಸೂಕ್ತ ದಾಖಲೆ ಬಿಡುಗಡೆ ಮಾಡಲಿ ಉತ್ತರ ಕೊಡುತ್ತೇವೆ ಎಂದು ಸವಾಲು ಹಾಕಿದರು.

‘ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿ.ಟಿ.ರವಿ, ಆರ್‌.ಅಶೋಕ, ಸಿ.ಎನ್‌. ಅಶ್ವತ್ಥನಾರಾಯಣ ಅವರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಕರೆತರಲಿ, ‘ವಿಜಯೇಂದ್ರ ಪರ್ಯಾಯ ಸರ್ಕಾರ ನಡೆಸುತ್ತಿದ್ದರೆಂದು, ರೂ.50 ಸಾವಿರ ಕೋಟಿ ಲೂಟಿ ಮಾಡಿದ್ದಾರೆಂದು ಬಿಜೆಪಿ ನಾಯಕರೇ ಹೈಕಮಾಂಡ್‌ಗೆ 2019ರಲ್ಲಿ ಪತ್ರ ಬರೆದಿದ್ದರು. ಆ ಬಗ್ಗೆಯೂ ತನಿಖೆ ನಡೆಯಲಿ. ದೇಶದ ಸ್ವಚ್ಛ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯ ಅವರಿಗೆ ನಂಬರ್ 1 ಸ್ಥಾನವಿದೆ. ಅವರನ್ನು ತೇಜೋವಧೆ ಮಾಡಲು ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ