ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ 
ರಾಜಕೀಯ

ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಬಿಜೆಪಿ ಸಮರ: ವಿಧಾನಸೌಧ ಮುತ್ತಿಗೆಗೆ ಯತ್ನ, ವಿಜಯೇಂದ್ರ ಸೇರಿ ಹಲವರು ಖಾಕಿ ವಶಕ್ಕೆ

ಹಗರಣ ಹಾಗೂ ಅಕ್ರಮ ಪ್ರಕರಣಗಳ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣ ಪ್ರಕರಣ ಸಂಬಂಧ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಸಮರವನ್ನು ಮುಂದುವರೆಸಿದೆ.

ಹಗರಣ ಹಾಗೂ ಅಕ್ರಮ ಪ್ರಕರಣಗಳ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಾಲ್ಮೀಕ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣವನ್ನ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಿಂದ ವಿಧಾನಸೌಧದವರೆಗೆ ಪ್ರತಿಭಟನಾ ರ್ಯಾಲಿ ನಡೆಯಿತು.

ಈ ನಡುವೆ ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನಿಸಿದ ಬಿವೈ ವಿಜಯೇಂದ್ರ ಸೇರಿ ಹಲವು ನಾಯಕರುತ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಮಧ್ಯೆ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್ ಮೇಲೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದ್ದು, ಹಗರಣ ಸರ್ದಾರ್ ಕಾಂಗ್ರೆಸ್ ಎಂದು ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಸಿಎಂ ಸಿದ್ದರಾಮಯ್ಯಗೆ ಭಯ ಶುರುವಾಗಿದೆ. ಇದರಿಂದಾಗಿ ಇಡಿ ಮೇಲೆ ಆರೋಪ ಮಾಡುತ್ತಿದ್ದಾರೆ ನಿಗಮದ ಭ್ರಷ್ಟಾಚಾರ ದೇಶಾದ್ಯಂತ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಗೆ ನೈತಿಕತೆ ಇದೆಯಾ..? ಎಂದು ಪ್ರಶ್ನಿಸಿದರು.

ಎಸ್ ಸಿ, ಎಸ್ ಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಆದರೂ ಕಾಂಗ್ರೆಸ್ ನಿರಪರಾಧಿಗಳೆಂದು ಹೇಳಿಕೆ ಕೊಡ್ತಾ ಇದೆ. ಅಧಿಕಾರಿಗಳ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT