ಡಿ.ಕೆ ಶಿವಕುಮಾರ್ 
ರಾಜಕೀಯ

ಯಡಿಯೂರಪ್ಪ ಹಾಗೂ ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿ.ಕೆ ಶಿವಕುಮಾರ್

ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದೇವೆ.

ಬೆಂಗಳೂರು: ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ ₹22 ಕೋಟಿ, ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ ₹5 ಕೋಟಿ, ದೇವರಾಜ್ ಅರಸು ನಿಗಮದ ₹47 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಳಿಯ ₹10 ಕೋಟಿ ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಆರೋಪಿಸಿದರು.

ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಗೆ ಉತ್ತರಿಸಿದ ಅವರು, ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂಬುದನ್ನು ಜನರಿಗೆ ತಿಳಿಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಹುದ್ದೆಗೆ ₹2500 ಕೋಟಿ, ಮಂತ್ರಿ ಸ್ಥಾನಕ್ಕೆ ₹100 ಕೋಟಿ ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ ಎಂದು ಮರುಪ್ರಶ್ನಿಸಿದರು.

ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ ಎಂದು ಹೇಳಿದರು.

ವಾಲ್ಮೀಕಿ ನಿಗಮದ ₹86 ಕೋಟಿ ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್ ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿಗಳಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ ಎಂದು ಖಾರವಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT