ರಾಜಕೀಯ

ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ: ಬಿಜೆಪಿ

ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಎಸ್ ಸಿ ಸಮುದಾಯದ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿದೆ.

ಬೆಂಗಳೂರು: ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಎಸ್ ಸಿ ಸಮುದಾಯದ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿದೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿ ಛಲವಾದಿ ನಾರಾಯಾಣಸ್ವಾಮಿಗೆ ಅಭಿನಂದನೆ ತಿಳಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ 'ಸಾಮಾಜಿಕ ನ್ಯಾಯ' ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ಟ್ವೀಟಿಸಿದ್ದಾರೆ.

ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಇದೀಗ ಪಕ್ಷವು ವಿಪಕ್ಷ ನಾಯಕನ ಸ್ಥಾನಕ್ಕೆ ಛಲವಾದಿ ನಾರಾಯಣ ಸ್ವಾಮಿ ಅವರನ್ನು ನೇಮಿಸಿದೆ.

ಮೇಲ್ಮನೆಯಲ್ಲಿ ಎನ್‌ಡಿಎ ಬಹುಮತ ಹೊಂದಿದೆ. ಕಾಂಗ್ರೆಸ್ 35 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿದ್ದರೂ, ಬಿಜೆಪಿ - 25 ಹಾಗೂ ಅದರ ಮಿತ್ರ ಪಕ್ಷ ಜೆಡಿಎಸ್ 8 ಮತ್ತು ಸ್ವತಂತ್ರ ಸದಸ್ಯರನ್ನು ಸೇರಿಸಿದರೆ ಒಟ್ಟು 38 ಸ್ಥಾನಗಳನ್ನು ಹೊಂದಿದೆ. ಜೆಡಿಎಸ್‌ನಿಂದ ಬಿಜೆಪಿಗೆ ಬದಲಾದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮೈತ್ರಿಯಿಂದ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT