ಸಂಸದೆ ಸುಮಲತಾ ಅಂಬರೀಷ್ 
ರಾಜಕೀಯ

ಮಂಡ್ಯ 'ತ್ಯಾಗ' ಮಾಡಿದ್ದ ಸುಮಲತಾಗೆ ಬಂಪರ್ ಗಿಫ್ಟ್: ಬಿಜೆಪಿಯಿಂದ MLC ಟಿಕೆಟ್?

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಜೂನ್‌ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಸಂಸದೆ ಸುಮಲತಾಗೆ ಟಿಕೆಟ್ ನೀಡುವ ಸಾಧ್ಯತೆಯಿದೆ.

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಜೂನ್‌ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ತನ್ನ ಪಾಲಿನ ಮೂರು ಸ್ಥಾನಗಳಿಗೆ ವಿಧಾನಪರಿಷತ್‌ನ ಹಾಲಿ ಸದಸ್ಯ ಎನ್‌.ರವಿಕುಮಾರ್‌, ಸಂಸದೆ ಸುಮಲತಾ ಮತ್ತು ಪ್ರೊ.ಎಂ.ನಾಗರಾಜ್ ಅವರನ್ನು ಸಂಭಾವ್ಯ ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸುವ ಸಾಧ್ಯತೆಗಳಿವೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್‌ ಅವರಿಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್‌ ಸಿಕ್ಕಿಲ್ಲ. 2024 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜೊತೆಗೆ ಮೈತ್ರಿಯಾದ ಹಿನ್ನೆಲೆ ಸುಮಲತಾ ಅಂಬರೀಶ್‌ ಅವರಿಗೆ ಟಿಕೆಟ್‌ ಕೈ ತಪ್ಪಿದ್ದು, ಇದೀಗ ಬಿಜೆಪಿ ಹೈಕಮಾಂಡ್‌ ಬಂಪರ್‌ ಆಫರ್‌ ನೀಡಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಮೂರು ಸ್ಥಾನಗಳಿಗೆ ಬಿಜೆಪಿಯಲ್ಲಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸುಮಾರು 40 ಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದರು. ನಳಿನ್‌ಕುಮಾರ್ ಕಟೀಲ್‌, ಪ್ರತಾಪ ಸಿಂಹ, ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ ಸೇರಿದಂತೆ ಹಲವರ ಹೆಸರುಗಳು ಮುಂಚೂಣಿಗೆ ಬಂದಿದ್ದವು. ಸುಮಾರು 15 ಹೆಸರುಗಳನ್ನು ಅಂತಿಮಗೊಳಿಸಿ ವರಿಷ್ಠರಿಗೆ ಕಳುಹಿಸಲಾಗಿತ್ತು. ಜೂನ್ 01ರಂದು ಅಧಿಕೃತ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ