ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು 
ರಾಜಕೀಯ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ; ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆ.ಹೆಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ಹೆಚ್.ಕೆ. ಪಾಟೀಲ್ ಮತ್ತಿತರ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಖಾಸಗಿ ಹೋಟೆಲ್​ನಲ್ಲಿ ನಡೆದ ಸಭೆಯಲ್ಲಿ ಸುಮಾರು ಒಂದು ಗಂಟೆ ಕಾಲ ಪರಿಷತ್ ಚುನಾವಣೆ ಸಂಬಂಧ ಚರ್ಚೆ ನಡೆಸಲಾಯಿತು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆ.ಹೆಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ಹೆಚ್.ಕೆ. ಪಾಟೀಲ್ ಮತ್ತಿತರ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಪರಿಷತ್ ಚುನಾವಣೆ ಸಂಬಂಧ ಚರ್ಚೆ ನಡೆಸಲಾಯಿತು.

ಇಂದು ನಡೆಯುವ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಶಾಸಕರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದರು. ಒಂದು ವೇಳೆ ಜೂನ್​ 13ರಂದು ಚುನಾವಣೆ ನಡೆದರೆ, ಮತದಾನ ಮಾಡಲು ಶಾಸಕರು ಆಗಮಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಸಚಿವ ಬಿ. ನಾಗೇಂದ್ರ ಗೈರು: ವಾಲ್ಮೀಕಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಸಭೆಗೆ ಗೈರಾಗಿದ್ದರು.

ಇದೇ ವೇಳೆ ಲೋಕಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಬಗ್ಗೆಯೂ ಚರ್ಚೆ ನಡೆದಿದ್ದು, ಯಾರೂ ಭಯಪಡುವ ಅಗತ್ಯ ಇಲ್ಲ. ರಾಜ್ಯದಲ್ಲಿ ನಾವು ಎರಡಂಕಿ ಪಡೆಯುತ್ತೇವೆ. ಎಲ್ಲರೂ ಚುನಾವಣೆಯಲ್ಲಿ ಸಕ್ರಿಯರಾಗಿ ಕೆಲಸ ಮಾಡಿದ್ದೇವೆ. ನಾವು 20 ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಶಾಸಕರು, ಸಚಿವರುಗಳಿಗೆ ಸಿಎಂ ಹಾಗೂ ಡಿಸಿಎಂ ಅಭಯ ನೀಡಿದರು ಎನ್ನಲಾಗಿದೆ.

ಸಭೆ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇಂದು ನಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದು, ಎಲ್ಲಾ ಶಾಸಕರ ಸಹಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT