ಡಿಕೆ ಶಿವಕುಮಾರ್, ಖರ್ಗೆ ಮತ್ತು ಸಿದ್ದರಾಮಯ್ಯ 
ರಾಜಕೀಯ

MLC ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ಸಿದ್ದರಾಮಯ್ಯ- ಖರ್ಗೆ 'ಕೈ' ಮೇಲು; ಒಕ್ಕಲಿಗರ ಹಿತಾಸಕ್ತಿ ಕಾಪಾಡುವಲ್ಲಿ ಡಿಕೆಶಿ ಸೋಲು!

ಮೂಲಗಳ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಕ್ರಮವಾಗಿ ಮೂರು ಮತ್ತು ಇಬ್ಬರು ನಾಮನಿರ್ದೇಶಿತರ ಆಯ್ಕೆಯಲ್ಲಿ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ.

ಬೆಂಗಳೂರು: ಜೂನ್ 13 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ವಿವಿಧ ಅಂಶಗಳನ್ನು ಅಳೆದು ಹಾಕಿದ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ, ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಸೇರಿದಂತೆ ತನ್ನ ಏಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

ಮೂಲಗಳ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಕ್ರಮವಾಗಿ ಮೂರು ಮತ್ತು ಇಬ್ಬರು ನಾಮನಿರ್ದೇಶಿತರ ಆಯ್ಕೆಯಲ್ಲಿ ತಮ್ಮ ಪ್ರಾಬಲ್ಯ ಸ್ಥಾಪಿಸಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಒಕ್ಕಲಿಗ ಸಮುದಾಯದ ಹಿತಾಸಕ್ತಿ ಕಾಪಾಡಲು ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷದ ವಿಧಾನಸಭೆ ಚುನಾವಣೆಗೂ ಮುನ್ನ ವರುಣಾ ವಿಧಾನಸಭೆ ಸ್ಥಾನವನ್ನು ತಂದೆಗೆ ಬಿಟ್ಟುಕೊಟ್ಟಿದ್ದಕ್ಕಾಗಿ ಯತೀಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಕ್ಷದ ಹೈಕಮಾಂಡ್, ವಿಶೇಷವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಕೂಡ ಯತೀಂದ್ರ ಅವರನ್ನು ಎಂಎಲ್‌ಸಿ ಮಾಡಲು ಬದ್ಧರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಬೋಸರಾಜು ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಹೈಕಮಾಂಡ್ ಅವರ ಹೆಸರನ್ನು ತೆರವುಗೊಳಿಸಿದೆ. ಎಸ್ಸಿ (ಎಡ) ಸಮುದಾಯದಿಂದ ಬಂದಿರುವ ಖರ್ಗೆ ನಿಷ್ಠಾವಂತರು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್ ಮತ್ತು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ್ ಗುತ್ತೇದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತಮ್ಮ ಪುತ್ರ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರ ನೆಲೆನ್ನು ಮಲ್ಲಿಕಾರ್ಜುನ ಖರ್ಗೆ ಬಲಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಜಿ ಎಂಎಲ್ ಸಿ ಐವನ್ ಡಿಸೋಜಾ ಅಲ್ಪಸಂಖ್ಯಾತರ ಕೋಟಾದಡಿ ನಾಮನಿರ್ದೇಶನಗೊಂಡರೆ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಶಿವಮೊಗ್ಗದಿಂದ ಬಂದ ಬಿಲ್ಕಿಸ್ ಬಾನೋ ಮಹಿಳಾ ಕೋಟಾದಡಿ ಆಯ್ಕೆಯಾಗಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷವೂ ಮಾಜಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ, ವೀರಶೇವ ಲಿಂಗಾಯತ ಮುಖಂಡ ಬಸನಗೌಡ ಬಾದರ್ಲಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಏತನ್ಮಧ್ಯೆ, ನಾಮನಿರ್ದೇಶಿತರ ಆಯ್ಕೆಯು ಅನೇಕ ಆಕಾಂಕ್ಷಿಗಳಿಗೆ ಹೊಡೆತ ನೀಡಿದೆ, ವಿಶೇಷವಾಗಿ ಕೊಪ್ಪಳದ ಮಾಜಿ ಬಿಜೆಪಿ ಸಂಸದ ಸಂಗಣ್ಣ ಕರಡಿ, ಮಾಜಿ ಎಂಎಲ್‌ಸಿಗಳಾದ ಕೆಪಿ ನಂಜುಂಡಿ ಮತ್ತು ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

74 ವರ್ಷದ ಕರಡಿ ಶೆಟ್ಟರ ಸ್ಥಾನವನ್ನು ನಿರೀಕ್ಷಿಸಿದ್ದರು. ಜತೆಗೆ ಪಕ್ಷದ ನಿಷ್ಠಾವಂತರಾದ ವಿ.ಎಸ್.ಸುದರ್ಶನ್, ಬಿ.ಎಲ್.ಶಂಕರ್, ವಿ.ಎಸ್.ಉಗ್ರಪ್ಪ, ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಡಾ.ಸಿ.ಎಸ್.ದ್ವಾರಕಾನಾಥ್, ಕೆಪಿಸಿಸಿ ಮುಖ್ಯ ವಕ್ತಾರ ಎ.ಎನ್.ನಟರಾಜ್ ಗೌಡ, ಐಶ್ವರ್ಯ ಮಹದೇವ್, ಕವಿತಾರೆಡ್ಡಿ, ಕಮಲಾಕ್ಷಿ ರಾಜಣ್ಣ, ಎಂ.ಸಿ.ವೇಣುಗೋಪಾಲ್, ಎಸ್.ಎ.ಹುಸೇನ್, ಡಾ.ಬಿ.ಸಿ.ಮುದ್ದುಗಂಗ, ಬಸವರಾಜು, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಸೇರಿದಂತೆ ಇತರರಿಗೂ ನಿರಾಸೆಯಾಗಿದೆ.

ಸುಮಾರು 300 ಆಕಾಂಕ್ಷಿಗಳಿದ್ದು, ಅವರಲ್ಲಿ ಶಿವಕುಮಾರ್ 60 ಮಂದಿಯನ್ನು ಶಾರ್ಟ್‌ಲಿಸ್ಟ್ ಮಾಡಿದ್ದು, ಹೈಕಮಾಂಡ್ ಗೆ ನೀಡಿದ್ದರು. ಜೂನ್ 13 ರಂದು ಚುನಾವಣೆ ನಡೆಯಲಿರುವ 11 ಸ್ಥಾನಗಳ ಪೈಕಿ ಏಳು ಸ್ಥಾನಗಳನ್ನು ಪಕ್ಷವು ಗೆಲ್ಲಬಹುದು ಮತ್ತು ಸೋಮವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರು ಸತತ ಮೂರನೇ ಬಾರಿಗೆ ಮೇಲ್ಮನೆಗೆ ಪ್ರವೇಶಿಸಿರುವುದು ಹಲವರ ಹುಬ್ಬೇರಿಸಿದೆ. ಪಕ್ಷಕ್ಕೆ ಅವರ ನಿಷ್ಠೆ ಮತ್ತು ಕ್ರೀಡಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳು ಫಲ ನೀಡಿದ್ದು ಹೈಕಮಾಂಡ್‌ಗೆ ಮನವರಿಕೆಯಾಗಿದೆ ಎಂಗಳು ತಿಳಿಸಿವೆ.

ನಾಮನಿರ್ದೇಶಿತ ಏಳು ಮಂದಿಯಲ್ಲಿ ಗೋವಿಂದರಾಜು ಮಾತ್ರ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದರೆ, ಲೋಕಸಭೆ ಚುನಾವಣೆಯ ನಂತರ ಪುನಾರಚನೆಯ ಸಂದರ್ಭದಲ್ಲಿ ಅವರು ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಗೊಳ್ಳುತ್ತಾರೆಯೇ ಎಂದು ನೋಡಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT