ಉತ್ತರಕನ್ನಡ: ಉತ್ತರಕನ್ನಡದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮೂರು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಉತ್ತರ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಟಫ್ ಫೈಟ್ ನೀಡಿತ್ತು.ಪ್ರಬುದ್ಧ ಮತದಾರರಿರುವ ಈ ಕ್ಷೇತ್ರದಲ್ಲಿ ಈ ಬಾರಿ ವಿಶ್ಲೇಷಣೆ ಕಷ್ಟಸಾಧ್ಯವಾಗುವಷ್ಟರ ಮಟ್ಟಿಗೆ ಹಣಾಹಣಿ ಇತ್ತು. ಈ ಕ್ಷೇತ್ರಕ್ಕೆ ಮೇ 07ರಂದು ನಡೆದ ಮತದಾನ ನಡೆದಿದ್ದು, ಶೇಕಡಾ 76.53ರಷ್ಟು ಮತದಾನ ಆಗಿತ್ತು. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಜಯ ಪತಾಕೆ ಹಾರಿಸಿದ್ದಾರೆ.