ಯದುವೀರ್ ಜೊತೆ ತ್ರಿಷಿಕಾ ಮತ್ತು ಪ್ರಮೋದಾ ದೇವಿ 
ರಾಜಕೀಯ

ಲೋಕಸಭೆ ಚುನಾವಣೆ: 20 ವರ್ಷಗಳ ನಂತರ ರಾಜಮನೆತನಕ್ಕೆ ಅಧಿಕಾರ ನೀಡುತ್ತದೆಯೇ ಮೈಸೂರು?

ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ 17 ಅಭ್ಯರ್ಥಿಗಳ ಭವಿಷ್ಯ ಮಂಗಳವಾರ ನಿರ್ಧಾರವಾಗಲಿದೆ. 20 ವರ್ಷಗಳ ನಂತರ ರಾಜಮನೆತನವು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಮೂಲಕ ಈ ಬಾರಿ ರಾಷ್ಟ್ರದ ಗಮನ ಸೆಳೆದಿದೆ.

ಮೈಸೂರು: ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ 17 ಅಭ್ಯರ್ಥಿಗಳ ಭವಿಷ್ಯ ಮಂಗಳವಾರ ನಿರ್ಧಾರವಾಗಲಿದೆ. 20 ವರ್ಷಗಳ ನಂತರ ರಾಜಮನೆತನವು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಮೂಲಕ ಈ ಬಾರಿ ರಾಷ್ಟ್ರದ ಗಮನ ಸೆಳೆದಿದೆ.

ಈ ಹಿಂದೆ ಎರಡು ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ಸೋಲಿನ ರುಚಿ ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವಿರುದ್ಧ ಯದುವೀರ್ ಕಣಕ್ಕಿಳಿದಿದ್ದಾರೆ. ಮೈಸೂರು ಕ್ಷೇತ್ರ ಸದ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆಯ ಕದನವಾಗಿ ಮಾರ್ಪಟ್ಟಿದೆ.

ಎರಡು ಬಾರಿ ಹಾಲಿ ಸಂಸದ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ನಿರಾಕರಿಸಿ ಅಚ್ಚರಿ ಮೂಡಿಸಿದ್ದು, ಸಂಸತ್ ಚುನಾವಣೆಗೆ ಸ್ಪರ್ಧಿಸಲು ಯದುವೀರ್ ಅವರನ್ನು ಬಿಜೆಪಿ ಕರೆ ತಂದಿದೆ. ಜೆಡಿಎಸ್‌ನಿಂದ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಎನ್‌ಡಿಎ ಸೇರುವ ಪಕ್ಷದ ನಿರ್ಧಾರದಿಂದ ಅನೇಕರು ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆಮಾಚಿ,ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಬೇಕಾಯಿತು.

ಹಾಸನದಲ್ಲಿ ಪ್ರಜ್ವಲ್ ರೇವಣ್ಣ, ಮಂಡ್ಯದಲ್ಲಿ ಎಚ್‌ಡಿ ಕುಮಾರಸ್ವಾಮಿ, ಚಾಮರಾಜನಗರದಲ್ಲಿ ಎಸ್ ಬಾಲರಾಜ್ ಮತ್ತು ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಒಡೆಯರ್ ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಜಂಟಿ ಪ್ರಚಾರ ನಡೆಸಿದರು. ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳನ್ನು ಕಡಿತಗೊಳಿಸಿರುವುದರಿಂದ, ನಗರ ಮತ್ತು ಗ್ರಾಮೀಣ ಭಾಗದ ಯುವಕರ ಬೆಂಬಲವನ್ನು ಹೊಂದಿರುವುದರಿಂದ ತಮ್ಮ ಅಭ್ಯರ್ಥಿ ನಿರಾಯಾಸವಾಗಿ ಭಾರೀ ಅಂತರದಿಂದ ಗೆಲ್ಲುತ್ತಾರೆ ಎಂದು ಬಿಜೆಪಿ ಹೇಳಿಕೊಂಡಿದೆ.

ಬಿಜೆಪಿ ವಿರುದ್ಧ ದನಿಯೆತ್ತಿದ್ದ ವಕ್ತಾರ ಎಂ.ಲಕ್ಷ್ಮಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಆದ್ಯತೆ ನೀಡಿದ್ದು, ಒಕ್ಕಲಿಗ ಮತಗಳನ್ನು ಸೆಳೆಯಲು ಪ್ಲಾನ್ ಮಾಡಿದ. ಸಿಎಂ ಸಿದ್ದರಾಮಯ್ಯ ಕ್ಷೇತ್ರಕ್ಕೆ ಮೂರು ಬಾರಿ ಭೇಟಿ ನೀಡಿ ಒಂದು ವಾರಕ್ಕೂ ಹೆಚ್ಚು ಕಾಲ ವಿಧಾನಸಭಾ ಕ್ಷೇತ್ರಗಳಲ್ಲಿ ಮೊಕ್ಕಾಂ ಹೂಡಿದ್ದರು. ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಲೆಂದು ತಮ್ಮ ಪಕ್ಷವು ಐದು ಭರವಸೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದ್ದರು.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಉನ್ನತ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ, ಒಕ್ಕಲಿಗ ಮತದಾರರು ಕಾಂಗ್ರೆಸ್‌ಗೆ ತಮ್ಮ ಬೆಂಬಲ ನೀಡುತ್ತಾರೆ, ಹಾಗೂ ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಮತ ಕಾಂಗ್ರೆಸ್ ಪರ ಮತ ಚಲಾಯಿಸುತ್ತಾರೆ ಎಂದು ಹಲವರು ನಂಬಿದ್ದಾರೆ. ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದವರು ತಮ್ಮ ಅಭ್ಯರ್ಥಿಯನ್ನು ಪ್ರಬಲವಾಗಿ ಬೆಂಬಲಿಸಿದ್ದಾರೆ ಎಂದು ಹೇಳುವ ಕಾಂಗ್ರೆಸ್ ನಾಯಕರು ಸೀಟು ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಚುನಾವಣೋತ್ತರ ಸನ್ನಿವೇಶವು ಬಿಜೆಪಿ ಇಲ್ಲಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ಸೂಚಿಸುತ್ತಿದ್ದರೂ, ಸರ್ಕಾರದ ಭರವಸೆಗಳು ಸಮತೋಲನವನ್ನು ಸಾಧಿಸುತ್ತದೆ ಎಂಬ ಬಗ್ಗೆ ಪಕ್ಷದ ಒಳಗಿನವರು ಭರವಸೆ ವ್ಯಕ್ತ ಪಡಿಸಿದ್ದಾರೆ.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿದಿದ್ದು, ಮಂಡ್ಯ ಕೂಡ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಬಿಜೆಪಿಯು ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವ ಸಂಪುಟಕ್ಕೆ ಕುಮಾರಸ್ವಾಮಿ ಬರುವ ಸಾಧ್ಯತೆಯಿದೆ. ಪಕ್ಷದ ಉಳಿವಿಗಾಗಿ ಜೆಡಿಎಸ್ ಈ ಸ್ಥಾನವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಉದ್ಯಮಿ ಸ್ಟಾರ್ ಚಂದ್ರು ಅವರಿಗಿಂತ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಬಲವಿದೆ ಎಂದು ಪಕ್ಷ ಹೇಳಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT