ಎಚ್ ಡಿಕೆ, ಶೆಟ್ಟರ್ ಮತ್ತು ಬೊಮ್ಮಾಯಿ 
ರಾಜಕೀಯ

ಲೋಕಸಭೆ ಚುನಾವಣೆ: ಮೂವರು ಮಾಜಿ ಸಿಎಂಗಳಿಗೆ ಮಣೆ ಹಾಕಿದ ಮತದಾರ; 2ನೇ ಬಾರಿಗೆ HDK ಸಂಸತ್ ಪ್ರವೇಶ!

ಲೋಕಸಭಾ ಚುನಾವಣೆಯಲ್ಲಿಅದೃಷ್ಟ ಪರೀಕ್ಷೆಗೆ ಇಳಿದಿದ್ದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿಅದೃಷ್ಟ ಪರೀಕ್ಷೆಗೆ ಇಳಿದಿದ್ದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ.

ಜೆಡಿಎಸ್‌ನಿಂದ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯಿಂದ ಶೆಟ್ಟರ್ ಮತ್ತು ಬೊಮ್ಮಾಯಿ ಅವರು ಗೆದ್ದಿದ್ದಾರೆ, ಈ ಮೂವರು ಎನ್‌ಡಿಎ ಮೈತ್ರಿ ಕೂಟದವರು ಎನ್ನುವುದು ವಿಶೇಷ. ಶೆಟ್ಟರ್ ಮತ್ತು ಬೊಮ್ಮಾಯಿ ಇವರಿಬ್ಬರು ಹುಬ್ಬಳ್ಳಿಯವರು ಎನ್ನುವುದು ಮತ್ತೊಂದು ವಿಶೇಷ. ಕುಮಾರಸ್ವಾಮಿ 2ನೇ ಬಾರಿಗೆ ಸಂಸತ್ ಪ್ರವೇಶ ಮಾಡುತ್ತಿದ್ದರೆ, ಬಿಜೆಪಿಯ ಶೆಟ್ಟರ್ ಮತ್ತು ಬೊಮ್ಮಾಯಿ ಇಬ್ಬರೂ ಇದೇ ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ವಿರುದ್ಧ 43,513 ಮತಗಳ ಅಂತರದಿಂದ ಗೆದ್ದಿದ್ದಾರೆ. ಇನ್ನೂ ಮತ್ತೊಬ್ಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಲಾವಣೆಯಾದ ಒಟ್ಟು 13,75,285 ಮತಗಳಲ್ಲಿ 7,56,471 ಮತ ಗಳಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ 5,80,897 ಮತಗಳನ್ನು ಪಡೆದು ಸೋಲುಂಡರು. ಶೆಟ್ಟರ್‌ ಅವರಿಗೆ ಬೆಳಗಾವಿ ಟಿಕೆಟ್‌ ಘೋಷಣೆ ಮಾಡಿದಾಗಲೇ ‘ಅರ್ಧ ಗೆದ್ದೆವು’ ಎಂಬ ವಿಶ್ವಾಸ ಕಾಂಗ್ರೆಸ್ಸಿಗರಲ್ಲಿ ಮೂಡಿತ್ತು. ಆ ಅತಿಯಾದ ವಿಶ್ವಾಸವೇ ಅವರನ್ನು ಸೋಲಿನ ದವಡೆಗೆ ತಳ್ಳಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT