ಎಚ್.ವಿಶ್ವನಾಥ್ 
ರಾಜಕೀಯ

ಇನ್ನಾದರೂ ಏಕವಚನ, ದುರಹಂಕಾರದ ಮಾತು ಬಿಡಲಿ; ಜನರ ಅಲೆಯಿಂದ ಯದುವೀರ್ ಗೆಲುವು: ಎಚ್.ವಿಶ್ವನಾಥ್

ಯಾವುದೇ ಅಲೆಯಿಂದ ಯದುವೀರ್ ಒಡೆಯರ್ ಆಯ್ಕೆಯಾಗಿಲ್ಲ‌. ಜನರ ಪ್ರೀತಿಯಿಂದ ಗೆಲುವು ಕಂಡಿದ್ದಾರೆ, ರಾಜರ ಕೊಡುಗೆಗಳನ್ನು ನಾವು ಸ್ಮರಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದ್ದಾರೆ.

ಮೈಸೂರು: ಯಾವುದೇ ಅಲೆಯಿಂದ ಯದುವೀರ್ ಒಡೆಯರ್ ಆಯ್ಕೆಯಾಗಿಲ್ಲ‌. ಜನರ ಪ್ರೀತಿಯಿಂದ ಗೆಲುವು ಕಂಡಿದ್ದಾರೆ, ರಾಜರ ಕೊಡುಗೆಗಳನ್ನು ನಾವು ಸ್ಮರಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆಯಲ್ಲೇ ಬಿಜೆಪಿಗೆ ಸೋಲಾಗಿದೆ. ಜನರು ಇದನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ. ಜನರಿಗೆ ಮೂಲಭೂತ ಸೌಕರ್ಯಗಳ ಅವಶ್ಯಕತೆ ಇದೆ. ಅದನ್ನ ಫಲಿತಾಂಶದ ಮೂಲಕ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇನ್ನು ಯದುವೀರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದಂತೆ ಮಾಡಿಕೊಂಡ ಮನವಿಗೆ ಸಿಎಂ, ಡಿಸಿಎಂ ಸ್ಪಂದಿಸಲಿಲ್ಲ. ಅಭ್ಯರ್ಥಿಯನ್ನು ‌ನಿಲ್ಲಿಸಿ ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲಾಗಿದೆ. ಜನರು ಮಹಾರಾಜರನ್ನೇ ಗೆಲ್ಲಿಸಿದ್ದಾರೆ. ಜಾತಿ ವಿಚಾರ ಮುಂದಿಟ್ಟುಕೊಂಡು ಮತಯಾಚನೆ ಮಾಡಿದವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಇನ್ನು ಮುಂದಾದರೂ ಏಕವಚನ, ದುರಹಂಕಾರದ ಮಾತುಗಳನ್ನು ಬಿಡಬೇಕು ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಜನರ ನಡುವೆ ಒಡಕುಂಟು ಮಾಡುವ ಮಾತುಗಳನ್ನು ನಾಯಕರು ಆಡಬಾರದು. ಯದವೀರ್ ಅವರಿಗೂ ಸಾಕಷ್ಟು ಜವಾಬ್ದಾರಿಗಳು ಇವೆ. ಇನ್ನು ಮುಂದಾದರೂ ಕಾಂಗ್ರೆಸ್ ಸರ್ಕಾರ ಯದವೀರ್ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT