ಯತೀಂದ್ರ-ಸಿದ್ದರಾಮಯ್ಯ 
ರಾಜಕೀಯ

ಯತೀಂದ್ರ, ಸಿಟಿ ರವಿ ಸೇರಿದಂತೆ 3 ಪಕ್ಷದ ಎಲ್ಲಾ 11 ಸದಸ್ಯರು ವಿಧಾನ ಪರಿಷತ್‌ಗೆ ಅವಿರೋಧವಾಗಿ ಆಯ್ಕೆ

ವಿಧಾನ ಪರಿಷತ್ ಗೆ ಕಾಂಗ್ರೆಸ್ 7, ಬಿಜೆಪಿ 3, ಜೆಡಿಎಸ್ 1 ಸೇರಿ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ವಿಧಾನ ಪರಿಷತ್ ಗೆ ಕಾಂಗ್ರೆಸ್ 7, ಬಿಜೆಪಿ 3, ಜೆಡಿಎಸ್ 1 ಸೇರಿ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆಯಲ್ಲಿ ಈಗಿರುವ ಸಂಖ್ಯಾಬಲದ ಪ್ರಕಾರ, ಕಾಂಗ್ರೆಸ್ 7 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದ್ದರೆ, ಬಿಜೆಪಿ 3 ಹಾಗೂ ಜೆಡಿಎಸ್ 1 ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ, ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಿಲ್ಕಿಸ್ ಬಾನೊ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಸಲಹೆಗಾರ ಕೆ.ಗೋವಿಂದರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್, ಮಾಜಿ ಎಂಎಲ್ಸಿ ಐವನ್ ಡಿಸೋಜಾ, ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಅವರು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದಾರೆ.

ಇನ್ನು ಬಿಜೆಪಿಯು ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಎಂಎಲ್‌ಸಿ ಮತ್ತು ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಮತ್ತು ಪಕ್ಷದ ನಾಯಕ ಎಂ ಜಿ ಮುಳೆ ಹಾಗೂ ಜೆಡಿಎಸ್ ನ ಟಿ ಎನ್ ಜವರಾಯಿ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!