ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಶಿಕಲಾ ಜೊಲ್ಲೆ  
ರಾಜಕೀಯ

ಬೆಳಗಾವಿ: ಎರಡು ಪ್ರಭಾವಿ ರಾಜಕೀಯ ಕುಟುಂಬಗಳನ್ನು ಸಾರಸಗಟಾಗಿ ತಿರಸ್ಕರಿಸಿದ ತವರು ಕ್ಷೇತ್ರದ ಮತದಾರರು!

ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬೆಳಗಾವಿ ಜಿಲ್ಲೆಯ ರಾಜಕೀಯವಾಗಿ ಬಲಿಷ್ಠ ಕುಟುಂಬಗಳು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಮತದಾರರು ಸಹ ಈ ಅಭ್ಯರ್ಥಿಗಳ ಪರವಾಗಿಲ್ಲ ಎಂಬುದು ಸಾಬೀತಾಗಿದೆ.

ಬೆಳಗಾವಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬೆಳಗಾವಿ ಜಿಲ್ಲೆಯ ರಾಜಕೀಯವಾಗಿ ಬಲಿಷ್ಠ ಕುಟುಂಬಗಳು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಮತದಾರರು ಸಹ ಈ ಅಭ್ಯರ್ಥಿಗಳ ಪರವಾಗಿಲ್ಲ ಎಂಬುದು ಸಾಬೀತಾಗಿದೆ.

ಈ ಕುಟುಂಬಗಳು ತಮ್ಮ ತವರು ಕ್ಷೇತ್ರಗಳಿಂದ ಮತದಾರರನ್ನು ಲಘುವಾಗಿ ಪರಿಗಣಿಸಿದ್ದರಿಂದ ಹಿನ್ನಡೆಯಾಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಳ್ಕಾರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಬೆಳಗಾವಿಯಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಚಿಕ್ಕೋಡಿಯಿಂದ ಸ್ಪರ್ಧಿಸಿದ್ದರು. ಚಿಕ್ಕೋಡಿಯಲ್ಲಿ ಪಕ್ಷದ ನಿರ್ಧಾರ ಸರಿಯಾಗಿದೆ, ಆದರೆ ಬೆಳಗಾವಿಯಲ್ಲಿ ಮೃಣಾಲ್ ಗೆ ದಯನೀಯ ಸೋಲು ಉಂಟಾಗಿದೆ.

ಮೃಣಾಲ್ ಹೆಬ್ಬಾಳ್ಕರ್ ಅವರು ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧ 1,78,437 ಮತಗಳಿಂದ ಸೋತಿದ್ದಾರೆ. ಈ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಳಗಾವಿ ಗ್ರಾಮಾಂತರವನ್ನು ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುತ್ತಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಅವರು ಈ ಕ್ಷೇತ್ರದಿಂದ 56,000 ಮತಗಳ ಅಂತರದಿಂದ ಗೆದ್ದಿದ್ದರು.

ಈ ಕ್ಷೇತ್ರದಿಂದ ಮೃಣಾಲ್ ಕನಿಷ್ಠ 50 ಸಾವಿರ ಮತಗಳ ಮುನ್ನಡೆ ಪಡೆಯಲಿದ್ದಾರೆ ಎಂದು ಕುಟುಂಬಸ್ಥರು ವಿಶ್ವಾಸ ವ್ಯಕ್ತಪಡಿಸಿದರು. ಆದರೆ ಮತದಾರರು ಕುಟುಂಬವನ್ನು ತಿರಸ್ಕರಿಸಿದ್ದು, ಜಗದೀಶ್ ಶೆಟ್ಟರ್ ಇಲ್ಲಿ 50,529 ಮತಗಳ ದೊಡ್ಡ ಲೀಡ್ ಪಡೆದಿದ್ದಾರೆ.

ಜಿಲ್ಲೆಯ ಮತ್ತೊಂದು ರಾಜಕೀಯ ಕುಟುಂಬಕ್ಕೂ ಇದೇ ಪರಿಸ್ಥಿತಿ ಎದುರಾಗಿದೆ. ಚಿಕ್ಕೋಡಿಯಲ್ಲಿ ಬಿಜೆಪಿಯ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಪ್ರಿಯಾಂಕಾ ಜಾರಕಿಹೊಳಿ ವಿರುದ್ಧ 90,834 ಮತಗಳಿಂದ ಸೋತಿದ್ದಾರೆ. ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ನಿಪ್ಪಾಣಿಯನ್ನು ಅಣ್ಣಾಸಾಹೇಬ ಜೊಲ್ಲೆ ಅವರ ಪತ್ನಿ ಶಶಿಕಲಾ ಪ್ರತಿನಿಧಿಸುತ್ತಿದ್ದಾರೆ.

ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎನ್‌ಸಿಪಿ ಸದಸ್ಯ ಉತ್ತಮ್ ಪಾಟೀಲ್ ವಿರುದ್ಧ 7 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಶಶಿಕಲಾ ಜಯಗಳಿಸಿದ್ದರು. ನಿಪ್ಪಾಣಿ ವಿಧಾನಸಭಾ ಕ್ಷೇತ್ರವೊಂದರಲ್ಲೇ ಪ್ರಿಯಾಂಕಾ 29,752 ಮತಗಳ ಮುನ್ನಡೆ ಸಾಧಿಸಿದ್ದರಿಂದ ಜೊಲ್ಲೆ ಕುಟುಂಬಕ್ಕೆ ಆಘಾತವಾಗಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮತದಾರರು ವಿಭಿನ್ನವಾಗಿ ಆಯ್ಕೆ ಮಾಡುತ್ತಾರೆ ಎಂಬುದಕ್ಕೆ ಇದು ಮತ್ತೊಮ್ಮೆ ಸಾಕ್ಷಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT