ಎಂಬಿ ಪಾಟೀಲ 
ರಾಜಕೀಯ

ಚುನಾವಣೆಯಲ್ಲಿ ಹಿನ್ನಡೆ, ಕಾಂಗ್ರೆಸ್ ಆತ್ಮಾವಲೋಕನ: ಎಂ ಬಿ ಪಾಟೀಲ

ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದರು.

ಕಳೆದ ಒಂದು ವರ್ಷದಲ್ಲಿ ರಾಜ್ಯ ಸರಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ನಾವು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ' ಎಂದರು.

ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು ಎಂದು ಹೇಳಿದರು.

ಈಗ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಸಲ ಬಿಜೆಪಿ ಬಲ ಕುಂದಿದೆ. ಹೀಗಾಗಿ ಈ ಸಲ ಅವರ ಸರಕಾರ ಎಷ್ಟು ದಿನ ಇರುತ್ತದೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶಕುಮಾರ್ ತರಹದ ವ್ಯಕ್ತಿಯನ್ನು ಇಟ್ಟುಕೊಂಡು ಸರಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ ಎಂದು ಅವರು ಭವಿಷ್ಯ ನುಡಿದರು. ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಾಸ್ಥಾನಗಳಲ್ಲಿ ಬಿಜೆಪಿ ಹೆಚ್ಚಿನ ಕಡೆ ಸೋಲಲಿದೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ಅದೇ ರೀತಿ ಆಗಿದೆ ಎಂದು ಅವರು ನೆನಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ, BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ: ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

High court stays: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ!

ಬೆಂಗಳೂರಿನ ಐದು ಹೊಸ ಪಾಲಿಕೆಗಳಿಗೆ 368 ವಾರ್ಡ್ ರಚನೆ: ಪಶ್ಚಿಮ ಪಾಲಿಕೆಗೆ ಗರಿಷ್ಠ 111 ವಾರ್ಡ್

SCROLL FOR NEXT