ಅಶ್ವತ್ಥ್ ನಾರಾಯಣ್ 
ರಾಜಕೀಯ

ರಾಹುಲ್ ಸಭೆಯ ಉದ್ದೇಶ ಹಗರಣಗಳ ಮುಚ್ಚಿ ಹಾಕುವುದಾ? ಅಥವಾ..: ಬಿಜೆಪಿ ಪ್ರಶ್ನೆ

ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ರಾಜೀನಾಮೆಯೇ? ಪಕ್ಷದಿಂದ ಉಚ್ಚಾಟಿಸುವಿರಾ? ಅವರನ್ನು ಬಂಧಿಸುವಿರಾ? ಸಾಕ್ಷಿ ನಾಶ ಮಾಡುವ ಬಗ್ಗೆ ಮಹತ್ವದ ಸಭೆ ನಡೆಸಿದ್ದ ಸಚಿವ ಶರಣಪ್ರಕಾಶ್ ಪಾಟೀಲರನ್ನು ಬಂಧಿಸುವಿರಾ? ಅವರ ಉಚ್ಚಾಟನೆ ಮಾಡುವಿರಾ?

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ ಅವ್ಯವಹಾರ ಹಗರಣವನ್ನು ಮುಚ್ಚಿ ಹಾಕಲು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲು ರಾಹುಲ್ ಗಾಂಧಿಯವರು ಬಂದಿದ್ದಾರಾ? ಅಥವಾ ಮುಖ್ಯಮಂತ್ರಿಯವರ ರಾಜೀನಾಮೆ ಪಡೆಯಲು ಸಭೆ ಕರೆದಿದ್ದಾರಾ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್​ನಾರಾಯಣ್ ಅವರು, ದಲಿತರ ಹಣವನ್ನು ಲೂಟಿ ಹೊಡೆದ ಸರ್ಕಾರವಿದು. ನೀವು ಈ ಸರ್ಕಾರದ ರಾಜೀನಾಮೆ ಪಡೆಯಲು ಬಂದಿದ್ದೀರಾ? ಎಂದು ಪ್ರಶ್ನಿಸಿದರು.

ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ರಾಜೀನಾಮೆಯೇ? ಪಕ್ಷದಿಂದ ಉಚ್ಚಾಟಿಸುವಿರಾ? ಅವರನ್ನು ಬಂಧಿಸುವಿರಾ? ಸಾಕ್ಷಿ ನಾಶ ಮಾಡುವ ಬಗ್ಗೆ ಮಹತ್ವದ ಸಭೆ ನಡೆಸಿದ್ದ ಸಚಿವ ಶರಣಪ್ರಕಾಶ್ ಪಾಟೀಲರನ್ನು ಬಂಧಿಸುವಿರಾ? ಅವರ ಉಚ್ಚಾಟನೆ ಮಾಡುವಿರಾ ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟರು.

ಹಗರಣ ದೊಡ್ಡ ಜಾಲ ಇದ್ದಂತಿದೆ. ಎಲ್ಲರೂ ಅನುಕೂಲ ಪಡೆದುಕೊಂಡಂತೆ ಕಾಣುತ್ತಿದೆ. ಹಾಗಾಗಿ ಎಲ್ಲ ಸಂದೇಹಗಳಿಗೆ ಉತ್ತರ ಕೊಟ್ಟು ಕ್ರಮ ವಹಿಸಬೇಕಿದೆ. ಕರ್ಮಕಾಂಡ ಮಾಡಿ ಭಂಡತನದಲ್ಲಿ ಏನೂ ಉತ್ತರ ಕೊಡದೆ ನಾಗೇಂದ್ರ ಅವರ ರಾಜೀನಾಮೆಯನ್ನು ಅತ್ಯಂತ ಕಷ್ಟಪಟ್ಟು ಪಡೆದಿದ್ದಾರೆ ಎಂದು ಹೇಳಿದರು.

ಎಲ್ಲರ ಭಾಗಿತ್ವ, ಸರಕಾರದ ಸಹಮತ ಇಲ್ಲದೆ, ಎಲ್ಲರ ಗಮನಕ್ಕೆ ಬಾರದೆ ರಾಜ್ಯ ಖಜಾನೆಯಿಂದ ಹಣ ವರ್ಗಾವಣೆ ಮಾಡಲು ಹೇಗೆ ಸಾಧ್ಯ? ಮುಖ್ಯ ಲೆಕ್ಕಾಧಿಕಾರಿ ಪರಶುರಾಂ ಅವರು ತಮ್ಮ ಅಫಿಡವಿಟ್‍ನಲ್ಲಿ ಸಾಕ್ಷಿ ನಾಶ ಆಗದಂತೆ ನೋಡಿಕೊಳ್ಳಲು ಕೋರಿದ್ದಾರೆ.

ಸಚಿವರ ಕಚೇರಿಯಲ್ಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ, ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಬ್ಯಾಂಕ್ ಶಾಖೆಯಲ್ಲಿನ ಸಿಸಿಟಿವಿ ಕ್ಯಾಮೆರಾದ ಮೂರು ತಿಂಗಳ ದೃಶ್ಯಾವಳಿ ಮತ್ತು ವಾಟ್ಸಾಪ್ ಕರೆ ದಾಖಲೆಗಳನ್ನು ರಕ್ಷಿಸುವಂತೆ ಮುಖ್ಯ ಲೆಕ್ಕಾಧಿಕಾರಿಗಳು ವಿನಂತಿಸಿದ್ದಾರೆ. ಆದರೆ, ಮೇ 25 ನೇ ತಾರೀಕು ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್ ಅವರ ಕೊಠಡಿಯಲ್ಲಿ ಈ ಹಗರಣಕ್ಕೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ- ಶಾಸಕ ಬಸವನಗೌಡ ದದ್ದಲ್ ಜೊತೆ ಈ ಪ್ರಕರಣದ ಚರ್ಚೆ ನಡೆದಿದೆ ಎಂದು ವಿವರಿಸಿದರು.

ದದ್ದಲ್ ಎಂಬ ಈ ಮಹಾಪುರುಷರು ಪರಿಶಿಷ್ಟ ಪಂಗಡದ ಶಾಸಕರು. ಈ ಜನರ ರಕ್ಷಣೆ, ಪ್ರತಿನಿಧಿತ್ವ, ಸಬಲೀಕರಣ, ಅಭಿವೃದ್ಧಿಗಾಗಿ ಡಾ. ಅಂಬೇಡ್ಕರರು ಮೀಸಲಾತಿ ಕೊಟ್ಟಿದ್ದಾರೆ. ಆ ಜನಾಂಗಕ್ಕೆ ಸೇರಿ, ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿ ಎಂಥ ದ್ರೋಹ ಬಗೆಯುತ್ತಿದ್ದಾರೆ? ನಾಗೇಂದ್ರ, ದದ್ದಲ್ ಅವರು ಜನಾಂಗದ ದುಡ್ಡನ್ನೇ ಲೂಟಿ ಹೊಡೆಯುತ್ತಿದ್ದಾರೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇವರು ಕಮೀಷನ್ ಪಡೀತಾರೆ. ನೇರವಾಗಿ ಖಜಾನೆಯಿಂದ ಲೂಟಿ ಹೊಡೀತಾರೆ. ಆರ್ಥಿಕ ಸಚಿವರಾದ ಸಿದ್ದರಾಮಯ್ಯನವರ ಧ್ವನಿಯೇ ಹೊರಟು ಹೋಗಿದೆ. ಈ ಕುರಿತು ಅವರು ಎಲ್ಲೂ ಮಾತನಾಡುತ್ತಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಎಸ್‌ಟಿಗಳ ಅಭಿವೃದ್ಧಿಗೆ ಮೀಸಲಾದ ಹಣವನ್ನು ಸರ್ಕಾರ ಲೂಟಿ ಮಾಡುತ್ತಿದೆ. ಎಸ್‌ಟಿ ಕಲ್ಯಾಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಸಿಬಿಐ ತನಿಖೆಯಿಂದ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT