ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ದಲಿತ ಡಿಸಿಎಂ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ: ಡಾ ಜಿ ಪರಮೇಶ್ವರ್

ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ವಿಚಾರ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.

ಡಾ ಜಿ ಪರಮೇಶ್ವರ್
Manjula VN
Updated On : 11 Jun 2024, 8:52 am

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ವಿಚಾರ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ್​​ ಅವರು, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಹಾಗೂ ದಲಿತ ಉಪಮುಖ್ಯಮಂತ್ರಿ ಕುರಿತು ವರಿಷ್ಠರು ತೀರ್ಮಾನ ಮಾಡುತ್ತಾರೆಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ದಲಿತ ಡಿಸಿಎಂ ಇರುವುದು ಪಕ್ಷದ ಹೈಕಮಾಂಡ್‌ಗೆ ಸರಿ ಎಂದು ಅನಿಸಿದರೆ, ಅವರೇ ನೇಮಿಸುತ್ತಾರೆ. ಆಡಳಿತ ಉತ್ತಮವಾಗಿದೆ ಎಂದು ಉನ್ನತಾಧಿಕಾರಿಗಳು ಭಾವಿಸಿದರೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದರು.

Advertisement

Advertisement

ಈ ಬಗ್ಗೆ ಡಿಸಿಎಂ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂಪರ್ಕಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು

Also Read

ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರ ಚಾಲನೆ: ಗೃಹ ಸಚಿವ ಪರಮೇಶ್ವರ್

ದೆಹಲಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದು, ಅದರಲ್ಲಿ ಸಿಎಂ ಮತ್ತು ಡಿಸಿಎಂ ಭಾಗವಹಿಸಲಿದ್ದಾರೆ ಎಂದೂ ಇದೇ ವೇಳೆ ತಿಳಿಸಿದರು.

ಮೋದಿ 3.0 ಸಂಪುಟದಲ್ಲಿ ಹಿಂದುಳಿದ ವರ್ಗಗಳ ಸಂಸದರಿಗೆ ಪ್ರಾತಿನಿಧ್ಯ ಸಿಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಅವರಿಗೆ (ಬಿಜೆಪಿ) ದಲಿತರು ಅಥವಾ ಹಿಂದುಳಿದ ವರ್ಗಗಳ ಜನರು ಅಗತ್ಯವಿಲ್ಲ ಎಂದು ತೋರುತ್ತಿದೆ. ಈ ಸಮುದಾಯಗಳಿಂದ ಅನೇಕರು ಬಿಜೆಪಿ ಟಿಕೆಟ್‌ ಪಡೆದು ಗೆಲವು ಸಾಧಿಸಿದ್ದಾರೆ. ಅವರನ್ನೂ ಪರಿಗಣಿಸಬಹುದಿತ್ತು ಎಂದರು.

ಕೇಂದ್ರ ಸಂಪುಟದಲ್ಲಿ ಕರ್ನಾಟಕದ ಐವರು ಸಚಿವರಿದ್ದಾರೆ. ಜಿಎಸ್‌ಟಿ, ಮೇಕೆದಾಟು ಮುಂತಾದ ಹಲವು ಸಮಸ್ಯೆಗಳು ರಾಜ್ಯ ಎದುರಿಸುತ್ತಿವೆ. ಕೇಂದ್ರದ ನೆರವಿನಿಂದ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments