ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ 
ರಾಜಕೀಯ

ವಿರೋಧ ಪಕ್ಷದ ನಾಯಕರಿಗೆ ಸರ್ಕಾರಿ ವಸತಿ ಗೃಹ ಹಂಚಿಕೆಯಲ್ಲಿ ವಿಳಂಬ; ಚರ್ಚೆಗೆ ಗ್ರಾಸ!

ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಸರ್ಕಾರಿ ನಿವಾಸ ಇನ್ನೂ ಸಿಕ್ಕಿಲ್ಲ. ಸರ್ಕಾರಿ ನಿವಾಸಕ್ಕೆ ಆರ್.‌ಅಶೋಕ್ ಮನವಿ ಮಾಡಿದರೂ ಸರ್ಕಾರ ಮಾತ್ರ ಈವರೆಗೂ ಯಾವುದೇ ಸ್ಪಂದನೆ ನೀಡಿಲ್ಲ. ಈ ಬಗ್ಗೆ 4 ಬಾರಿ ಪತ್ರ ಬರೆದರೂ ಸರ್ಕಾರಿ ನಿವಾಸ ನೀಡದೆ ಇರುವುದು ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಸರ್ಕಾರಿ ನಿವಾಸ ಇನ್ನೂ ಸಿಕ್ಕಿಲ್ಲ. ಸರ್ಕಾರಿ ನಿವಾಸಕ್ಕೆ ಆರ್.‌ಅಶೋಕ್ ಮನವಿ ಮಾಡಿದರೂ ಸರ್ಕಾರ ಮಾತ್ರ ಈವರೆಗೂ ಯಾವುದೇ ಸ್ಪಂದನೆ ನೀಡಿಲ್ಲ. ಈ ಬಗ್ಗೆ 4 ಬಾರಿ ಪತ್ರ ಬರೆದರೂ ಸರ್ಕಾರಿ ನಿವಾಸ ನೀಡದೆ ಇರುವುದು ಚರ್ಚೆಗೆ ಗ್ರಾಸವಾಗಿದೆ.

ವಿಪಕ್ಷ ನಾಯಕನಾಗಿರುವ ನನಗೆ ಯಾವುದಾದರು ಒಂದು ಸರ್ಕಾರಿ ನಿವಾಸ ನೀಡಿ ಎಂದು ಆರ್ ಅಶೋಕ್ ಮನವಿ ಮಾಡಿದ್ದರು. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿವಾಸ ಅಥವಾ ಕುಮಾರಕೃಪಾ ನಿವಾಸಕ್ಕೆ ಮನವಿ ಮಾಡಿದ್ದರು. ಆದರೆ, ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ದು ಎಂದು ಅಶೋಕ ಅವರ ಆಪ್ತರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವರಿಗೆ ಆದ್ಯತೆಯ ಮೇಲೆ ಅಧಿಕೃತ ನಿವಾಸಗಳನ್ನು ನೀಡಲಾಗಿದೆ, ಆದರೆ ಪ್ರತಿಪಕ್ಷ ನಾಯಕನಿಗೆ ಸಂಬಂಧಿಸಿದಂತೆ ಮೂಲ ಶಿಷ್ಟಾಚಾರವನ್ನು ಅನುಸರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇದು ರಾಜ್ಯ ಸರ್ಕಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮುಖ್ಯ ಕಾರ್ಯದರ್ಶಿಗೆ ಮತ್ತು ಈ ವರ್ಷದ ಫೆಬ್ರವರಿಯಲ್ಲಿ ಸಿಎಂಗೆ ಅಶೋಕ ಅವರು ಬರೆದ ಪತ್ರದಲ್ಲಿ ನಂ. 1 ಕುಮಾರಕೃಪಾ ಪೂರ್ವ ನಿವಾಸ, ನಂ. 1 ರೇಸ್ ವ್ಯೂವ್ ಕಾಟೇಜ್, ನಂ.‌ 2 ರೇಸ್ ವ್ಯೂವ್ ಕಾಟೇಜ್ ಮೂರರಲ್ಲಿ ಒಂದು ನಿವಾಸಕ್ಕೆ ಆರ್ ಅಶೋಕ್ ಮನವಿ ಮಾಡಿದ್ದರು. ಆದರೆ, ಸರ್ಕಾರ ಇನ್ನೂ ಸ್ಪಂದಿಸಿಲ್ಲ ಎನ್ನಲಾಗಿದೆ.

ಅಧಿಕೃತ ನಿವಾಸದ ಸಿಗದ ಕಾರಣ ಅಶೋಕ್ ಅವರು, ಪ್ರಸ್ತುತ ಜಯನಗರದಲ್ಲಿರುವ ತಮ್ಮ ಸ್ವಗೃಹದಲ್ಲಿಯೇ ಅಧಿಕೃತ ಸಭೆಗಳನ್ನು ನಡೆಸುತ್ತಿದ್ದಾರೆ.

ರಾಜ್ಯದಾದ್ಯಂತ ಜನರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಲು ಬರುತ್ತಾರೆ. ಅಧಿಕಾರಿಗಳನ್ನು ಭೇಟಿ ಮಾಡುವುದನ್ನು ಹೊರತುಪಡಿಸಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಅವರು ನಿಯಮಿತವಾಗಿ ಪ್ರತಿಪಕ್ಷದ ಶಾಸಕರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ, ಈ ಸಭೆಗಳಲ್ಲಿ ಪಾಲ್ಗೊಳ್ಳುವವರಿಗೆ ವಿಧಾನಸೌಧದ ಬಳಿ ಇರುವ ಅಧಿಕೃತ ನಿವಾಸವು ಸಹಾಯ ಮಾಡುತ್ತದೆ.

ಅಶೋಕ ಮನವಿ ಮಾಡಿರುವ ಕ್ವಾಟ್ರರ್ಸ್‌ ಖಾಲಿ ಇದ್ದರೂ ಹಲವು ಬಾರಿ ಪತ್ರ ಬರೆದು ಅಧಿಕಾರಿಗಳನ್ನು ಭೇಟಿ ಮಾಡಿದರೂ ಸರ್ಕಾರ ಇನ್ನು ಅಧಿಕೃತ ನಿವಾಸ ಮಂಜೂರು ಮಾಡಿಲ್ಲ. ಇಂತಹ ನಿರ್ಧಾರಗಳನ್ನು ತಡಮಾಡದೆ ತೆಗೆದುಕೊಳ್ಳಬಹುದು, ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯ ಕಾರ್ಯದರ್ಶಿ ಏಕೆ ಏನನ್ನೂ ನಿರ್ಧರಿಸುತ್ತಿಲ್ಲ ಎಂಬುದು ನಮಗೆ ತಿಳಿದಿಲ್ಲ ಎಂದು ನಾಯಕರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT