ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಕುಮಾರಸ್ವಾಮಿ ಅವರ ನಾಯಕತ್ವ ಗುರುತಿಸಿ ಮೋದಿ ಸಚಿವ ಸ್ಥಾನ ನೀಡಿದ್ದಾರೆ: ನಿಖಿಲ್

ಮೋದಿ 3.0 ಕ್ಯಾಬಿನೆಟ್‌ನಲ್ಲಿ ಕೇಂದ್ರ ಸಚಿವರಾಗಿ ನೇಮಕ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಂದೆ ಎಚ್‌ಡಿ ಕುಮಾರಸ್ವಾಮಿ ಅವರ ನಾಯಕತ್ವವನ್ನು ಗುರುತಿಸಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಮೋದಿ 3.0 ಕ್ಯಾಬಿನೆಟ್‌ನಲ್ಲಿ ಕೇಂದ್ರ ಸಚಿವರಾಗಿ ನೇಮಕ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಂದೆ ಎಚ್‌ಡಿ ಕುಮಾರಸ್ವಾಮಿ ಅವರ ನಾಯಕತ್ವವನ್ನು ಗುರುತಿಸಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದಲ್ಲಿ ಭಾರೀ ಗೆಲುವಿನ ನಂತರ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ದೆಹಲಿಗೆ ಕರೆಸಿಕೊಂಡು ನಮಗೆಲ್ಲರಿಗೂ ತಿಳಿದಿರುವ ಹಾಗೆ ಅವರಿಗೆ ಅತ್ಯಂತ ಜವಾಬ್ದಾರಿಯುತವಾದ ಕೇಂದ್ರ ಸಚಿವ ಸ್ಥಾನವನ್ನು ನೀಡಲಾಗಿದೆ. ಅವರು ಇಂದು ಕೇಂದ್ರ ಸಚಿವರಾಗಿದ್ದು, ದೇಶ ಮತ್ತು ರಾಜ್ಯಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಈ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಆಡಳಿತದಿಂದಾಗಿ ಅವರಿಗೆ ಈ ಅವಕಾಶ ಸಿಕ್ಕಿದೆ ಎಂದು ನಿಖಿಲ್ ಹೇಳಿದ್ದಾರೆ.

ಪಿಎಂ ಮೋದಿ ಅವರು ಕುಮಾರಸ್ವಾಮಿ ಅವರ ನಾಯಕತ್ವವನ್ನು ಗುರುತಿಸಿದ್ದಾರೆ ಮತ್ತು ಅವರಿಗೆ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. ಕುಮಾರಸ್ವಾಮಿ ಅವರು ತಮ್ಮ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಹೇಳಿದರು. ನಾಳೆ, ಅವರು ಮೊದಲ ಬಾರಿಗೆ, ಕೇಂದ್ರ ಸಚಿವ ಸ್ಥಾನವನ್ನು ಸ್ವೀಕರಿಸಿದ ನಂತರ ಕರ್ನಾಟಕಕ್ಕೆ ಬರುತ್ತಿದ್ದಾರೆ. ಬೆಳಿಗ್ಗೆ 11:50 ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ನಾವು ಸತತ ಮೂರು ದಿನಗಳ ಕಾಲ ನಾವು ಹಲವಾರು ಕಾರ್ಯಕ್ರಮಗಳನ್ನು ಯೋಜಿಸಿದ್ದೇವೆ ನಿಖಿಲ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

SCROLL FOR NEXT