ರಾಜ್ಯ ಬಿಜೆಪಿ ನಾಯಕರು 
ರಾಜಕೀಯ

ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಸಿರಾಡುವುದಕ್ಕೂ ತೆರಿಗೆ ವಿಧಿಸಿದರೂ ಆಶ್ಚರ್ಯವಿಲ್ಲ: ಬಿಜೆಪಿ ಲೇವಡಿ

ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ 3 ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮಂಗಳೂರು: ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ 3 ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಸುನೀಲ್ ಕುಮಾರ್ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರು ಉಸಿರಾಡುವುದಕ್ಕೂ ತೆರಿಗೆ ವಿಧಿಸಿದರೆ ಆಶ್ಚರ್ಯವಿಲ್ಲ ಎಂದು ಲೇವಡಿ ಮಾಡಿದರು.

ಪೆಟ್ರೋಲ್ ಸೆಸ್ ಹೆಚ್ಚಿಸಿ ಆದೇಶ ಹೊರಡಿಸುವ ಮೂಲಕ ರಾಜ್ಯದ ಖಾಲಿ ಖಜಾನೆ ತುಂಬಿಸುವ ಗುರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ. ಸರಕಾರ ಎಲ್ಲ ರೀತಿಯಿಂದಲೂ ಜನರಿಂದ ಆದಾಯ ಸುಲಿಗೆ ಮಾಡುತ್ತಿದೆ. ಲಭ್ಯ ಇರುವ ಎಲ್ಲ ಆದಾಯ ಮೂಲಗಳಿಂದ ಸರ್ಕಾರ ಜನರನ್ನು ಎಷ್ಟು ಸುಲಿಗೆ ಮಾಡಿದರೂ ರಾಜಸ್ವ ಸಂಗ್ರಹ ದಿನೇ ದಿನೇ ಕುಸಿದು ಬೀಳುತ್ತಿದೆ. ಈ ವರ್ಷದ ತೆರಿಗೆ ಸಂಗ್ರಹಣೆಯಲ್ಲಿ ಹದಿಮೂರು ಸಾವಿರ ಕೋಟಿ ಕೊರತೆ ಸೃಷ್ಟಿಯಾಗಿರುವುದರಿಂದ ರಾಜ್ಯ ಸರ್ಕಾರ ಧೂಮಕೇತುವಿನ ರೀತಿ ಜನಸಾಮಾನ್ಯರ ಮೇಲೆ ಎರಗಿದೆ.

ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ಇಂಧನ ದರ ಇಳಿಕೆಗಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಆದರೆ, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಪೆಟ್ರೋಲ್ ಸೆಸ್ ಇಳಿಕೆ ಮಾಡಿದರೂ ಕರ್ನಾಟಕ ಸರ್ಕಾರ ಮಾತ್ರ ತೆಪ್ಪಗಿತ್ತು. ಬಜೆಟ್ ಗೆ ಮುನ್ನವೇ ಪೆಟ್ರೋಲಿಯಂ ಉತ್ಪನಗಳ ಮೇಲಿನ ಸೆಸ್ ಏರಿಕೆ ಮಾಡಲಾಗಿದೆ. ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಸಿರಾಡುವುದಕ್ಕೂ ತೆರಿಗೆ ಹಾಕುವುದು ಗ್ಯಾರಂಟಿ ಎಂದು ಲೇವಡಿ ಮಾಡಿದರು.

ವೈದ್ಯ ಶಿಕ್ಷಣ ಸೇರಿದಂತೆ ವೃತ್ತಿ ಶಿಕ್ಷಣ ಶುಲ್ಕವನ್ನು ಶೇ.10ರಷ್ಟು ಏರಿಕೆ ಮಾಡಿದ್ದ ಸರ್ಕಾರ ಪೆಟ್ರೋಲಿಗೆ ಬೆಂಕಿ ಹಚ್ಚಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಲೆ ಏರಿಕೆಯನ್ನು ಜನವಿರೋಧಿ ಎಂದು ಖಂಡಿಸಿದ್ದು, ಇಂಧನ ಏರಿಕೆಯನ್ನು ಹಿಂಪಡೆಯದಿದ್ದರೆ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದಕ್ಕೆ ಹೆಚ್ಚುವರಿಯಾಗಿ ಇಂಧನ ಬೆಲೆಯನ್ನೂ ಏರಿಕೆ ಮಾಡಿ, ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಇದು ನಿಜಕ್ಕೂ ದುರದೃಷ್ಟಕರ ಸಂಗತಿ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಮೂರ್ಖರನ್ನಾಗಿಸಿದೆ ಎಂದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಬಿಜೆಪಿಗೆ ಮತ ಹಾಕಿದ್ದರಿಂದ ಕಾಂಗ್ರೆಸ್ ಸರ್ಕಾರ ಜನರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದೆ ಎಂದರು.

ಸಿದ್ದರಾಮಯ್ಯ ಸರಕಾರ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರಕಾರದ ಬೊಕ್ಕಸವನ್ನು ಖಾಲಿ ಮಾಡಿದೆ ಸಿದ್ದರಾಮಯ್ಯನವರು ಕನ್ನಡಿಗರಿಗೆ ತೆರಿಗೆ ವಿಧಿಸಿ ಖಜಾನೆ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT