ವಿಧಾನಸೌಧ 
ರಾಜಕೀಯ

ಜುಲೈ 12 ರಂದು ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ

ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ ನಡೆಯಲಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಈ ಉಪಚುನಾವಣೆಗೆ ಜೂನ್ 25 ರಂದು ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ ಎರಡು ಕೊನೆಯ ದಿನಾಂಕವಾಗಿದೆ.

ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಜನವರಿ 24 ರಂದು ಶೆಟ್ಟರ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ತೆರವಾಗಿತ್ತು. ಅವರ ಅವಧಿ ಜೂನ್ 2028 ರಲ್ಲಿ ಕೊನೆಗೊಳ್ಳಬೇಕಿತ್ತು. ಆದರೆ 68 ವರ್ಷದ ಮಾಜಿ ಸಿಎಂ ಜನವರಿಯಲ್ಲಿ ಬಿಜೆಪಿಗೆ ಮರಳಿದ ನಂತರ ಕಾಂಗ್ರೆಸ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಂತರ ಬಿಜೆಪಿಯಿಂದ ಲೋಕಸಭೆ ಚುನಾವಣೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಜಗದೀಶ್ ಶೆಟ್ಟರ್ ಅವರು ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT