ಯೋಗ ದಿನಾಚರಣೆಯಲ್ಲಿ ಕುಮಾರಸ್ವಾಮಿ 
ರಾಜಕೀಯ

ಚನ್ನಪಟ್ಟಣದ ಬಗ್ಗೆ ಡಿಕೆಶಿಗೆ ದಿಢೀರ್ ಮಮತೆ ಬಂದಿದೆ: ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯ

ಚನ್ನಪಟ್ಟಣದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗ ದಿಢೀರ್ ಮಮತೆ ಬಂದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶುಕ್ರವಾರ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಚನ್ನಪಟ್ಟಣದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗ ದಿಢೀರ್ ಮಮತೆ ಬಂದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶುಕ್ರವಾರ ವ್ಯಂಗ್ಯವಾಡಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ದೆಹಲಿಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿಯವರೆಗೆ ಚನ್ನಪಟ್ಟಣ ಅಭಿವೃದ್ಧಿ ಮಾಡಬೇಡಿ ಎಂದು ಡಿಕೆ ಶಿವಕುಮಾರ್​ರನ್ನು ತಡೆದಿದ್ದು ಯಾರು? ಸಂಸದರಾಗಿ ಡಿಕೆ ಶಿವಕುಮಾರ್​ ಸಹೋದರನ ಕೊಡುಗೆ ಏನು? ಅವರು ಯಾರು ಬೇಕಾದರೂ ಅಭ್ಯರ್ಥಿಯಾಗಬಹುದು ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು. ನಮ್ಮ ಕಡೆಯಿಂದ ಅಭ್ಯರ್ಥಿ ಯಾರು ಎಂದು ಕಾಲ ನಿರ್ಧರಿಸುತ್ತದೆ ಎಂದು ತಿಳಿಸಿದರು.

ಯೋಗಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ. 2014ರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನ ಆಚರಿಸಲಾಗುತ್ತಿದೆ. ಮೈಸೂರಿನ ಅರಮನೆ ಮೈದಾನದಲ್ಲೂ ಮೋದಿ ಯೋಗ ಮಾಡಿದರು. ಯೋಗಕ್ಕೆ ಪ್ರಧಾನಿಗಳ ಪ್ರೊತ್ಸಾಹ ಹೆಚ್ಚು. ಇದರಿಂದಾಗಿ ಹೆಚ್ಚು ಪ್ರಚಾರ ದೊರೆತಿದೆ. ಯೋಗ ಕಾಯಿಲೆಗಳಿಂದ ಸ್ವಲ್ಪ ಮುಕ್ತಿ ನೀಡುತ್ತದೆ. ಆರೋಗ್ಯವಂತವಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು ಎಂದರು.

ಲೋಕಸಭಾ ಚುನಾವಣೆಯಲ್ಲಿ ಕರ್ನಾಟದಲ್ಲಿ ಕಾಂಗ್ರೆಸ್ ಕಡಿಮೆ ಸೀಟು ಬರಲು ಇವಿಎಂ ಕಾರಣ ಎಂಬ ಕಾಂಗ್ರೆಸ್ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದರು. ಕರ್ನಾಟಕದ ಲೋಕಸಭಾ ಫಲಿತಾಂಶಕ್ಕೆ ಇವಿಎಂ ಕಾರಣವಾದರೆ, 2023 ರ ವಿಧಾನಸಭೆ ವಿಧಾನ ಸಭೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರಗೆದ್ದಿತ್ತಲ್ಲ, ಆಗ ಇವಿಎಂ ದೋಷವಿತ್ತಾ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಅವರು ಟಾಂಗ್ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT