ಜಿ.ಟಿ ದೇವೇಗೌಡ 
ರಾಜಕೀಯ

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧಿಸಲ್ಲ, ಕೇವಲ ರಾಜಕೀಯ ತಂತ್ರಗಾರಿಕೆಯಷ್ಟೇ: ಜಿ.ಟಿ.ದೇವೇಗೌಡ

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಕೇವಲ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದ್ದಾರೆ.

ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಕೇವಲ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿರುವ ಮಾತು. ಡಿ.ಕೆ ಶಿವಕುಮಾರ್ ಅವರ ಮಾತಲ್ಲಿ ರಾಜಕೀಯ ತಂತ್ರಗಾರಿಕೆ ಇದೆಯಷ್ಟೇ. ಡಿ.ಕೆ ಸುರೇಶ್ ಅವರನ್ನು ಸ್ಪರ್ಧೆಗೆ ಇಳಿಸುವ ದೃಷ್ಟಿಯಿಂದ ನಾನು ಬಂದರೆ ಮತ ಹಾಕುತ್ತೀರಾ ಎಂದು ಜನರನ್ನು ಕೇಳುತ್ತಿದ್ದಾರೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ನಾನೇ ಸ್ಪರ್ಧೆ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಜನಗಳ ಅಭಿಪ್ರಾಯ ನನ್ನ ಪರವಾಗಿದ್ದಾರೆ ಎಂದಷ್ಟೇ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಅಂತಿಮವಾಗಿ ಮೈತ್ರಿ ನಾಯಕರು ಕುಳಿತು ತೀರ್ಮಾನ ಮಾಡುತ್ತೇವೆ. ಎಲ್ಲಾ ಉಪಚುನಾವಣೆಗಳು ಸರ್ಕಾರದ ಪರವಾಗಿಯೇ ಇರುವುದಿಲ್ಲ. ಒಂದೊಂದು ಬಾರಿ ಒಂದೊಂದು ಟ್ರೆಂಡ್ ನಡೆಯುತ್ತದೆ ಎಂದರು. ನಮ್ಮ ಅಭ್ಯರ್ಥಿ ಯಾರು ಎಂಬುದನ್ನು ನಾವಿನ್ನೂ ತೀರ್ಮಾನ ಮಾಡಿಲ್ಲ. ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ನಾನೇ ಅದನ್ನು ಹೇಳುತ್ತೇನೆ. ಕೋರ್ ಕಮಿಟಿಯ ಅಧ್ಯಕ್ಷ ನಾನೇ ಆಗಿರುವ ಕಾರಣ ಅಭ್ಯರ್ಥಿ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯ ಹೇಳಲು ಬರುವುದಿಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್