ಆರ್.ಅಶೋಕ್ 
ರಾಜಕೀಯ

ಸೂರಜ್ ರೇವಣ್ಣ ಪ್ರಕರಣದಲ್ಲೂ ನ್ಯಾಯಯುತ ತನಿಖೆ ಆಗಲಿ: ಆರ್ ಅಶೋಕ್

ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ನಡೆಯುತ್ತಿದ್ದು, ಸೂರಜ್ ರೇವಣ್ಣರ ವಿಚಾರದಲ್ಲೂ ನ್ಯಾಯಯುತ ತನಿಖೆ ಆಗಲಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಭಾನುವಾರ ಹೇಳಿದರು.

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ನಡೆಯುತ್ತಿದ್ದು, ಸೂರಜ್ ರೇವಣ್ಣರ ವಿಚಾರದಲ್ಲೂ ನ್ಯಾಯಯುತ ತನಿಖೆ ಆಗಲಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.

ನಾನು ಕೂಡ ಮಾಧ್ಯಮದಲ್ಲಿ ಸೂರಜ್ ರೇವಣ್ಣ ಬಗ್ಗೆ ನೋಡಿದ್ದೇನೆ. ಸೂರಜ್ ರೇವಣ್ಣ ಸಹ ಆರೋಪ ಮಾಡಿದ್ದಾರೆ. ನನ್ನನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಕೇಸ್‌ನಲ್ಲಿ ಮೇಲ್ನೋಟಕ್ಕೆ ಗೊಂದಲ ಕಾಣಿಸುತ್ತಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದರು.

ನಿಷ್ಪಕ್ಷಪಾತವಾದ ತನಿಖೆ ಆಗಲಿ. ತಪ್ಪಿತಸ್ಥರು ಯಾರೇ ಇದ್ದರೂ ಕಾನೂನು ಕ್ರಮ ಆಗೇ ಆಗುತ್ತೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಒಳ್ಳೆಯದಲ್ಲ. ಎರಡೂ ಕಡೆ ದೂರು ದಾಖಲು ಆದ ಹಿನ್ನೆಲೆಯಲ್ಲಿ ಇದು ಜಟಿಲ ಕೇಸ್ ರೀತಿಯಲ್ಲಿ ಕಾಣಿಸುತ್ತಿದೆ. ಮೊದಲೇ ದೂರು ಕೊಟ್ಟಿದು ಸೂರಜ್ ರೇವಣ್ಣ. ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಸೂಕ್ತ ತನಿಖೆ ಆಗಲಿ, ಸತ್ಯಾಸತ್ಯತೆ ಹೊರ ಬರಲಿ. ಇದು ಜೆಡಿಎಸ್ ಆಂತರಿಕ ವಿಚಾರ. ಇದರ ಬಗ್ಗೆ ಅವರ ನಾಯಕರು ಮಾತನಾಡುತ್ತಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!