ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ. 
ರಾಜಕೀಯ

ಕಾಂಗ್ರೆಸ್ ಸರ್ಕಾರ ಪತನ?: ಭಿನ್ನ ಹೇಳಿಕೆಗಳಿಂದ ಒಡಕು ಪ್ರದರ್ಶಿಸುತ್ತಿರುವ 'ಕಮಲ' ಪಡೆ!

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ವಿಚಾರದಲ್ಲಿ ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಮೂಡಿದೆ.

ಬೆಂಗಳೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ವಿಚಾರದಲ್ಲಿ ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಮೂಡಿದೆ.

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಅವರು ಯಾವುದೇ ಸಮಯದಲ್ಲಿ ಸರ್ಕಾರ ಪತನಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದರೂ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಾಂಗ್ರೆಸ್ ಅಧಿಕಾರಿದಲ್ಲಿರುವವರೆಗೂ ಪ್ರಬಲವಾಗಿ ಹೋರಾಟ ನಡೆಸಿ, ಶಕ್ತಿ ಪ್ರದರ್ಶಿಸಬೇಕೆಂದು ಹೇಳಿದ್ದಾರೆ.

ನೂತನ ಸಂಸದರಿಗೆ ಶನಿವಾರ ನಡೆದ ಸನ್ಮಾನ ಸಮಾರಭದಲ್ಲಿ ಮಾತನಾಡಿದ್ದ ವಿಜಯೇಂದ್ರ ಅವರು, ಮುಂದಿನ ನಾಲ್ಕು ವರ್ಷಗಳ ಕಾಲ ನಾವು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಬೇಕಾಗಿದೆ. ಬಿಜೆಪಿ ಆಡಳಿತದಲ್ಲಿ ರಾಜ್ಯ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿತ್ತು, ಆದರೆ ಒಂದು ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಹಿಂದುಳಿದಿದೆ,'' ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರನಾಗಿ ಅಧಿಕಾರವನ್ನು ಹತ್ತಿರದಿಂದ ನೋಡಿರುವ ವಿಜಯೇಂದ್ರ ಅವರಿಗೆ ಅಧಿಕಾರ ಹಿಡಿಯುವ ಆತುರವಿಲ್ಲ. ಬದಲಾಗಿ ತಂದೆಯಂತೆ ಪಕ್ಷ ಸಂಘಟನೆ ಮಾಡಲು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಜನರಿಗೆ ಹತ್ತಿರವಾಗಲು ಬಯಸಿದ್ದಾರೆಂದು ಮೂಲಗಳು ತಿಳಿಸಿವೆ.

ಯಡಿಯೂರಪ್ಪನವರಂತೆಯೇ ವಿಜಯೇಂದ್ರ ಅವರು ರಾಜ್ಯಾದ್ಯಂತ ಬಹುತೇಕ ಎಲ್ಲಾ ವೀರಶೈವ-ಲಿಂಗಾಯತ ಧಾರ್ಮಿಕ ಸಂಸ್ಥೆಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದು, ರಾಜ್ಯದ ದೊಡ್ಡ ಸಮುದಾಯದ ಪ್ರಬಲ ನಾಯಕರಾಗಿ ತಮ್ಮ ತಂದೆಯ ಸ್ಥಾನವನ್ನು ತುಂಬುವ ಸಾಮರ್ಥ್ಯ ಹೊಂದಿದ್ದಾರೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.

ವಿಜಯೇಂದ್ರ ಅವರಂತೆ ಮಾಜಿ ಸಚಿವ ಹಾಗೂ ಎಂಎಲ್ಸಿ ಸಿ.ಟಿ.ರವಿ ಅವರಿಗೂ ಅಧಿಕಾರ ಹಿಡಿಯುವ ಆತುರವಿಲ್ಲ. ಸಿಎಂ ಆಗುವ ಹಂಬಲದಲ್ಲಿರುವ ರವಿ ಅವರಿಗೆ ಬಿಜೆಪಿ ಹೈಕಮಾಂಡ್ ಹಾಗೂ ಆರ್‌ಎಸ್‌ಎಸ್‌ನ ಬೆಂಬಲವಿದೆ.

ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಪ್ರಯತ್ನಿಸುವುದಿಲ್ಲ ಏಕೆಂದರೆ ಸರ್ಕಾರ ರಚಿಸುವಷ್ಟು ಶಾಸಕರು ನಮ್ಮಲ್ಲಿ ಇಲ್ಲ ಎಂದು ಸಿಟಿ ರವಿ ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಬಲಿಷ್ಠ ನಾಯಕ ಎಂಬ ಹೆಸರು ದಿನಕಳೆಯುತ್ತಿದ್ದಂತೆಯೇ ಕಡಿಮೆಯಾಗುತ್ತಿದೆ. ಇದರಿಂದ ಮುಂದಿನ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಗೆ ಉತ್ತಮ ಅವಕಾಶ ಸಿಗಲಿದೆ ಎಂದು ತಿಳಿಸಿದ್ದಾರೆ.

ತಜ್ಞರ ಪ್ರಕಾರ, ಸಿಟಿ ರವಿ ಅವರನ್ನು ಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ, ಅದು ಅವರ ಬಲವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರ ಪತನ ಕುರಿತು ಕೇವಲ ಸೋಮಣ್ಣ ಅಷ್ಟೇ ಅಲ್ಲ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಡಿಸಿಎಂ ಗೋವಿಂದ್ ಕಾರಜೋಳ ಅವರೂ ಹೇಳಿಕೆ ನೀಡಿದ್ದಾರೆ. ಬಿಜೆಪಿಯಲ್ಲಿ ಒಂದು ಗುಂಪಿನ ನಾಯಕರು ಸರ್ಕಾರದ ಪತನ ಕುರಿತು ಮಾತನಾಡುತ್ತಿದ್ದರೆ, ಮತ್ತೊಂದು ಗುಂಪು ಪ್ರಬಲ ಹೋರಾಟ ಮಾಡಿ ಪಕ್ಷ ಸಂಘಟಿಸುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಈ ಹೇಳಿಕೆ ಪಕ್ಷದಲ್ಲಿ ಅಸಮಾಧಾನ, ಆಂತರಿಕ ಒಡಕನ್ನು ಪ್ರದರ್ಶಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT