ಸಿದ್ದರಾಮಯ್ಯ - ಆರ್ ಅಶೋಕ್ 
ರಾಜಕೀಯ

ಇಷ್ಟು ಅವಮಾನ ಆದಮೇಲೂ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು: ಆರ್ ಅಶೋಕ್

ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಗೊತ್ತಿಲ್ಲ ಎಂದಿದ್ದಾರೆ.

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಒಕ್ಕಲಿಗ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆ ಗುರುವಾರ ನಡೆದಿದ್ದು, ಇಷ್ಟು ಅವಮಾನ ಆದಮೇಲೂ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಎಂಬುದು ಗೊತ್ತಿಲ್ಲ. ಆದರೆ ಸಿದ್ದರಾಮಯ್ಯ ಅವರಿಗೆ ರಾಜಕೀಯದ ಒಳಗೆ ಹೋಗಿ ತಿಳಿದುಕೊಳ್ಳುವ ಸಾಮರ್ಥ್ಯ ಇದೆ ಎಂದರು.

ಒಂದು ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದು ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎಂದರು.

ಸಿದ್ದರಾಮಯ್ಯ ತಂತ್ರಕ್ಕೆ ಇದೊಂದು ಪ್ರತಿತಂತ್ರ ಅಷ್ಟೇ. ಡಿಕೆ ಶಿವಕುಮಾರ್​ಗೆ ಅವರ ತಮ್ಮನ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇನ್ನು ಮೂರು ಡಿಸಿಎಂಗಳಿಗೆ ಹಿನ್ನೆಲೆ ಗಾಯಕರೇ ಸಿದ್ದರಾಮಯ್ಯ. ಅದಕ್ಕೆ ಕೌಂಟರ್ ಆಗಿ ಧರ್ಮರಾಯ ಆದರೆ ಅಧಿಕಾರ ಬಿಟ್ಟುಕೊಡಬೇಕು ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

ಇಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯನವರೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ