ಡಿಕೆ ಸುರೇಶ್ 
ರಾಜಕೀಯ

ಯಾರದ್ದೋ ಹೆಸರಿನಲ್ಲಿ ರಾಜಕೀಯಕ್ಕೆ ಬಂದವರಲ್ಲ; ಯೋಗ್ಯತೆ ಇಲ್ಲ ಎನ್ನುವುದಾದರೆ ಚುನಾವಣೆಗೆ ಹೋಗಲಿ: ರಾಜಣ್ಣಗೆ ಡಿಕೆಸು ಟಾಂಗ್!

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂದ ಗೆಲುವಿನ ಶ್ರೇಯಸ್ಸು ಕಾರ್ಯಕರ್ತರಿಗೆ ಸಲ್ಲಬೇಕು, ಎರಡೂವರೆ ವರ್ಷಗಳ ಕಾಲ ಅವರು ಹಗಲಿರುಳು ಬೆವರು ಸುರಿಸಿ ಶ್ರಮಪಟ್ಟ ಕಾರಣ ಪಕ್ಷ ಗೆಲ್ಲುವುದು ಸಾಧ್ಯವಾಯಿತು ಎಂದು ಡಿ ಕೆ ಸುರೇಶ್ ಹೇಳಿದರು.

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಬೇಕೆಂಬ ಹೇಳಿಕೆ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ವಿರುದ್ಧ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಹೆಚ್ಚುವರಿ ಡಿಸಿಎಂಗಳು ಬೇಕೆಂದು ಒಂದೇ ಸಮ ವರಾತ ತೆಗೆಯುತ್ತಿರುವ ಸಹಕಾರ ಸಚಿವ ಕೆಎನ್ ರಾಜಣ್ಣಗೆ ಪಕ್ಷದಲ್ಲಿ ವಿರೋಧ ಹೆಚ್ಚುತ್ತಿದೆ. ಸಿಎಂ ಮತ್ತು ಡಿಸಿಎಂ ಹುದ್ದೆಗಳಿಗಾಗಿ ಆಸೆ ಪಡುತ್ತಿರುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ, ತಮ್ಮ ತಮ್ಮ ನಾಯಕತ್ವದಲ್ಲಿ ಪಕ್ಷವನ್ನು ಮುನ್ನಡೆಸಿ ಚುನಾವಣೆಯಲ್ಲಿ ಗೆದ್ದು ಸಿಎಂ ಅದರೂ ಅಗಲಿ, ಡಿಸಿಎಂ ಅದರೂ ಅಗಲಿ; ಯಾರು ಬೇಡ ಅಂತಾರೆ? ಹಿಂದೆ ಕಡಿಮೆ ಸ್ಥಾನಗಳನ್ನು ಗೆದ್ದ ಕಾರಣ ರಾಮಕೃಷ್ಣ ಹೆಗಡೆಯವರು ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ ನಡೆಸಿದ್ದರು, ಅದರಲ್ಲಿ ತಪ್ಪೇನೂ ಇಲ್ಲ ಸುರೇಶ್ ಹೇಳಿದರು. ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂದ ಗೆಲುವಿನ ಶ್ರೇಯಸ್ಸು ಕಾರ್ಯಕರ್ತರಿಗೆ ಸಲ್ಲಬೇಕು, ಎರಡೂವರೆ ವರ್ಷಗಳ ಕಾಲ ಅವರು ಹಗಲಿರುಳು ಬೆವರು ಸುರಿಸಿ ಶ್ರಮಪಟ್ಟ ಕಾರಣ ಪಕ್ಷ ಗೆಲ್ಲುವುದು ಸಾಧ್ಯವಾಯಿತು ಎಂದು ಡಿಕೆ ಸುರೇಶ್ ಹೇಳಿದರು.

ಉತ್ತಮ ಆಡಳಿತ ನಡೆಸಲಿ ಎಂದು ಹೈಕಮಾಂಡ್ ಜವಾಬ್ದಾರಿ ನೀಡಿದೆ. ಅವರಿಗೆ ಯೋಗ್ಯತೆ ಇಲ್ಲ ಎನ್ನುವುದಾದರೆ ಚುನಾವಣೆಗೆ ಹೋಗುವುದು ವಾಸಿ. ನಾವೆಲ್ಲರೂ ಚುನಾವಣೆಗೆ ಹೋಗೋಣ ಎಂದಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಜವಾಬ್ದಾರಿ ಕೊಟ್ಟಿರುವುದು ಪಕ್ಷದ ವರಿಷ್ಠರು. ವರಿಷ್ಠರ ಮುಂದೆ ಡಿಕೆ ಶಿವಕುಮಾರ್ ಎಲ್ಲವನ್ನೂ ತಿಳಿಸಿದ್ದಾರೆ. ವರಿಷ್ಠರ ಬಳಿ ನೀಡಿದ ಮಾಹಿತಿ ಬೇರೆಯವರಿಗೆ ತಿಳಿಸಲಾಗಲ್ಲ ಎಂದು ಅವರು ಹೇಳಿದರು.

ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆ ಕೂಡ ಶಾಶ್ವತ ಅಲ್ಲ. ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು. ಹಿಂದೆ ತಿರುಗಿ ಅವರ ಬೆನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ರಾಜಣ್ಣ ವಿರುದ್ಧ ವಾಗ್ದಾಳಿ ನಡೆಸಿದರು.

ಡಿಕೆ ಶಿವಕುಮಾರ್ ಅವರಿ​​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಸ್ವಾಮೀಜಿಗಳ ಅಭಿಪ್ರಾಯ. ಸ್ವಾಮೀಜಿ ಅವರ ವೈಯಕ್ತಿಕ ಅಭಿಪ್ರಾಯವನ್ನು ತಿಳಿಸಿದ್ದಾರೆ. ಸಿಎಂ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈಗ ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯನವರು ಇದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಸಿಎಂ ಸ್ಥಾನ‌ ಖಾಲಿಯಾದಾಗ ಇದು ಚರ್ಚೆಗೆ ಬರುತ್ತದೆ ಎಂದರು.

ಡಿಕೆ ಶಿವಕುಮಾರ್​ ಅವರನ್ನು ಯಾರೂ ಟಾರ್ಗೆಟ್‌ ಮಾಡಲು ಆಗಲ್ಲ. ಅವರನ್ನು ಟಾರ್ಗೆಟ್ ಮಾಡುತ್ತೇನೆ ಅಂದರೆ ಅದು ಅವರ ಭ್ರಮೆ. ಡಿಕೆ ಶಿವಕುಮಾರ್ ಅವರದ್ದೇ ವ್ಯಕ್ತಿತ್ವದಲ್ಲಿ ಹೋರಾಟದ ಮಾಡುತ್ತಿದ್ದಾರೆ. 35 ವರ್ಷಗಳ ಸುದೀರ್ಘ ರಾಜಕಾರಣ ಮಾಡಿದ್ದಾರೆ. ಯಾರದ್ದೋ ಹೆಸರಿನಲ್ಲಿ ರಾಜಕೀಯಕ್ಕೆ ಬಂದವರಲ್ಲ. ಹೋರಾಟದ ಮೂಲಕ ರಾಜಕಾರಣ ಮಾಡಿಕೊಂಡು ಬಂದವರು ಎಂದು ರಾಜಣ್ಣಗೆ ಸುರೇಶ್ ಪರೋಕ್ಷ ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT