ಪ್ರಮೋದ್ ಮದ್ವರಾಜ್, ಶೋಭಾ ಕರಂದ್ಲಾಜೆ 
ರಾಜಕೀಯ

ಉಡುಪಿ: ಶೋಭಾ ಕರಂದ್ಲಾಜೆಗೆ ಠಕ್ಕರ್; ಸ್ಥಳೀಯ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ಗೆ ಆಗ್ರಹಿಸಿ ನಾಳೆ ಬೈಕ್ ರ‍್ಯಾಲಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್‌ಗೆ ಬಿಜೆಪಿ ಟಿಕೆಟ್‌ಗಾಗಿ ಆಗ್ರಹಿಸಿ ಮೀನುಗಾರ ಸಮುದಾಯದ ಮುಖಂಡರ ಗುಂಪು ಮಲ್ಪೆ ಏಳೂರು ಮೊಗವೀರ ಭವನದಿಂದ ಕಡಿಯಾಲದ ಜಿಲ್ಲಾ ಬಿಜೆಪಿ ಕಚೇರಿಯವರೆಗೂ ನಾಳೆ ಬೈಕ್ ರ‍್ಯಾಲಿ ನಡೆಯಲಿದೆ.

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್‌ಗೆ ಬಿಜೆಪಿ ಟಿಕೆಟ್‌ಗಾಗಿ ಆಗ್ರಹಿಸಿ ಮೀನುಗಾರ ಸಮುದಾಯದ ಮುಖಂಡರ ಗುಂಪು ಮಲ್ಪೆ ಏಳೂರು ಮೊಗವೀರ ಭವನದಿಂದ ಕಡಿಯಾಲದ ಜಿಲ್ಲಾ ಬಿಜೆಪಿ ಕಚೇರಿಯವರೆಗೂ ನಾಳೆ ಬೈಕ್ ರ‍್ಯಾಲಿ ನಡೆಯಲಿದೆ.

ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನದಿಂದ ಬೈಕ್ ರ‍್ಯಾಲಿ ಆರಂಭವಾಗುವ ನಿರೀಕ್ಷೆ ಇದೆ. ಹಾಲಿ ಸಂಸದೆ ಶೋಭಾ ಕರಂದ್ಲಾಜೆ (ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ) ಕ್ರಿಯಾಶೀಲರಾಗಿಲ್ಲ ಎಂದು ಜನವರಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದ ಅಖಿಲ ಭಾರತ ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್ ಡಿ ಸುವರ್ಣ ನೇತೃತ್ವದಲ್ಲಿ ಈ ರ‍್ಯಾಲಿ ಆಯೋಜಿಸಲಾಗಿದೆ.

ಕರಾವಳಿ ಬೈಪಾಸ್ ಮತ್ತು ಮಲ್ಪೆ ನಡುವಿನ ಮೂರೂವರೆ ಕಿಮೀ ರಸ್ತೆ ಅಗಲೀಕರಣ ಕಾಮಗಾರಿಯನ್ನು ಪೂರ್ಣಗೊಳಿಸದ ಶೋಭಾ ಕರಂದ್ಲಾಜೆ ಅವರನ್ನು ಕಿಶೋರ್ ಸುವರ್ಣ ತರಾಟೆಗೆ ತೆಗೆದುಕೊಂಡಿದ್ದರು, ಇದರ ವಿಡಿಯೋ ಕಳೆದ ತಿಂಗಳು ವೈರಲ್ ಆಗಿತ್ತು. ಶನಿವಾರ ನಡೆಯುವ ಬೈಕ್ ರ‍್ಯಾಲಿ ಕಾರ್ಯಕ್ರಮದ ಪೋಸ್ಟರ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಸಂಘಟಕರ ಹೆಸರನ್ನು ಉಲ್ಲೇಖಿಸಲಾಗಿಲ್ಲ. ಪೋಸ್ಟರ್‌ನಲ್ಲಿ 'ನಿಸ್ವಾರ್ಥ' ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ ಮತ್ತು ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರನ್ನು ಆಹ್ವಾನಿಸಲಾಗಿದೆ.

ಬಿಜೆಪಿಯ ಉಡುಪಿ ಸಿಎಂಸಿ ಕೌನ್ಸಿಲರ್‌ಗಳಾದ ಸುಂದರ್ ಕಲ್ಮಾಡಿ, ಯೋಗೀಶ್ ಸಾಲಿಯಾನ್ ಮತ್ತು ಇತರ ಮುಖಂಡರು ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ಟಿಎನ್‌ಐಇಗೆ ತಿಳಿಸಿವೆ. ಪಕ್ಷದ ಹೈಕಮಾಂಡ್‌ಗೆ ತಮ್ಮ ಸಂದೇಶವನ್ನು ರವಾನಿಸಲು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸುವುದಾಗಿ ಪಕ್ಷದ ಕಾರ್ಯಕರ್ತರೊಬ್ಬರು ಟಿಎನ್‌ಐಇಗೆ ತಿಳಿಸಿದರು.

''ಕೇಂದ್ರ ಸರಕಾರದ ಸಾಕಷ್ಟು ಯೋಜನೆಗಳು, ಸವಲತ್ತುಗಳಿದ್ದರೂ ಶೋಭಾ ಕರಂದ್ಲಾಜೆಯವರು ಕ್ಷೇತ್ರದಲ್ಲಿ ಆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಶ್ರಮಿಸಿಲ್ಲ. ಹೀಗಾಗಿ ನಾವು ಸ್ಥಳೀಯ ಅಭ್ಯರ್ಥಿಯ ನಿರೀಕ್ಷೆಯಲ್ಲಿದ್ದೇವೆ ಎಂದು ಪಕ್ಷದ ಕಾರ್ಯಕರ್ತ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಮಾತನಾಡಿ, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ, ಪಕ್ಷದ ಹೈಕಮಾಂಡ್ ಯಾರನ್ನು ಅಭ್ಯರ್ಥಿ ಮಾಡಲು ನಿರ್ಧರಿಸಿದರೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಿದ್ದಾರೆ ಎಂದರು.

ರ‍್ಯಾಲಿಯಲ್ಲಿ ಸುಮಾರು 200 ರಿಂದ 250 ಬೈಕ್ ಸವಾರರು ಭಾಗವಹಿಸಬಹುದು ಎಂದು ಮೂಲಗಳು ತಿಳಿಸಿವೆ. ನಾನು ಜನರೊಂದಿಗೆ ಇದ್ದೇನೆ, ಪಕ್ಷಕ್ಕಾಗಿ ದುಡಿಯುತ್ತೇನೆ. ಜನರು, ಪಕ್ಷದ ಕಾರ್ಯಕರ್ತರು ನನ್ನ ಉಮೇದುವಾರಿಕೆಯನ್ನು ಬಯಸಿದರೆ, ನನಗೆ ಅವಕಾಶ ಸಿಗಬಹುದು ಎಂದು ಪ್ರಮೋದ್ ಮಧ್ವರಾಜ್ ಟಿಎನ್‌ಐಇಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT