ಕೇಂದ್ರ ಸಚಿವ ಪ್ರಲ್ಹಾದ ಜೋಶಿ 
ರಾಜಕೀಯ

ಕರ್ನಾಟಕವನ್ನು ಭಯೋತ್ಪಾದಕರ ತಾಣವನ್ನಾಗಿ ಮಾಡಬೇಡಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ರಾಜ್ಯವನ್ನು ಇಸ್ಲಾಮಿಕ್ ಮೂಲಭೂತವಾದಿಗಳು ಮತ್ತು ಉಗ್ರಗಾಮಿಗಳಿಗೆ ಸುರಕ್ಷಿತ ತಾಣವನ್ನಾಗಿ ಮಾಡುವಲ್ಲಿ ಕಾಂಗ್ರೆಸ್ ಕಾರಣವಾಗಿದೆ ಎಂದು ಆರೋಪಿಸಿದರು.

ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ರಾಜ್ಯವನ್ನು ಇಸ್ಲಾಮಿಕ್ ಮೂಲಭೂತವಾದಿಗಳು ಮತ್ತು ಉಗ್ರಗಾಮಿಗಳಿಗೆ ಸುರಕ್ಷಿತ ತಾಣವನ್ನಾಗಿ ಮಾಡುವಲ್ಲಿ ಕಾಂಗ್ರೆಸ್ ಕಾರಣವಾಗಿದೆ ಎಂದು ಆರೋಪಿಸಿದರು.

ಶನಿವಾರ ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಬೆಂಗಳೂರು ಸ್ಫೋಟಕ್ಕೆ ಅವರೇ ಹೊಣೆಗಾರರು ಮತ್ತು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗುವವರ ವಿರುದ್ಧ ಕಠಿಣವಾಗಿ ವರ್ತಿಸದಿರುವುದು ಅಂತಹ ಅಂಶಗಳನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.

ಭಯೋತ್ಪಾದನೆ ವಿರುದ್ಧ ಪಿಎಂ ನರೇಂದ್ರ ಮೋದಿ ಸರ್ಕಾರದ ಕ್ರಮವನ್ನು ಶ್ಲಾಘಿಸಿದ ಜೋಶಿ, ದೇಶದಲ್ಲಿ ಶೇ 90 ರಷ್ಟು ಭಯೋತ್ಪಾದನಾ ಚಟುವಟಿಕೆಗಳು ಕಡಿಮೆಯಾಗಿವೆ. ಆದರೆ, ಈ ಶಕ್ತಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಇಂದು ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕವು ಭಯೋತ್ಪಾದಕರು ಮತ್ತು ಉಗ್ರಗಾಮಿಗಳಿಗೆ ದಾಳಿ ನಡೆಸಲು ಸುರಕ್ಷಿತ ಸ್ಥಳವಾಗುತ್ತಿದೆ. ಕೇವಲ ನಿಮ್ಮ ಮತ ಬ್ಯಾಂಕ್‌ಗಾಗಿ ಕರ್ನಾಟಕವನ್ನು ಭಯೋತ್ಪಾದಕ ತಾಣವನ್ನಾಗಿ ಮಾಡಬೇಡಿ. ಇಂತಹ ಅಂಶಗಳಿಗೆ ಸಿದ್ದರಾಮಯ್ಯ ಮೊದಲು ಲಗಾಮು ಹಾಕಲಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT